ವಕ್ಫ್ ತಿದ್ದುಪಡಿ ಮಸೂದೆ ಅನುಮೋದನೆಗೆ ರಾಜ್ಯ ಕಾಂಗ್ರೆಸ್ ಸಂಸದರು ಕೈಯೆತ್ತಲೇ ಬೇಕು: ಯತ್ನಾಳ್

|

Updated on: Nov 14, 2024 | 11:28 AM

ಸಿದ್ದರಾಮಯ್ಯ ಸರ್ಕಾರ ರೈತರಿಗೆ ನೀಡಿದ ನೋಟೀಸ್ ಗಳನ್ನು ಮಾತ್ರ ವಾಪಸ್ಸು ಪಡೆಯುತ್ತಿದೆ, ಅದರಿಂದ ಏನೂ ಆಗಲ್ಲ, ರೈತರು ಮತ್ತು ಮಠಮಾನ್ಯಗಳಿಗೆ ಸೇರಿದ ಜಮೀನುಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವುದನ್ನು ಅಳಿಸಬೇಕು ಹಾಗೂ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಬೇಕೆಂದು ಬಸನಗೌಡ ಯತ್ನಾಳ್ ಹೇಳಿದರು.

ಬೆಳಗಾವಿ: ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ತಮ್ಮ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿಗಳನ್ನು ತರುವ ಪ್ರಸ್ತಾವನೆಯನ್ನು ಮಂಡಿಸಿದೆ, ತಿದ್ದ್ದುಪಡಿಗಳನ್ನು ಮಾಡಿದ ಬಳಿಕ ಕಾಯ್ದೆಯನ್ನು ಸಂಸತ್ತಿನಲ್ಲಿ ಪಾಸು ಮಾಡಲು ರಾಜ್ಯದ ಕಾಂಗ್ರೆಸ್ ಸಂಸದರು ಕೈ ಜೋಡಿಸಲೇಬೇಕು, ಇಲ್ಲದಿದ್ದರೆ ಅವರ ಮನೆಗಳ ಮುಂದೆ ಧರಣಿ ನಡೆಸಲಾಗುವುದು ಮತ್ತು ರೈತರು ಅವರಿಗೆ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮಸೀದಿ ಮುಂದೆ ಡ್ಯಾನ್ಸ್ ಮಾಡಬಾರದು ಎಂದರೆ ಪಾಕಿಸ್ತಾನ, ಬಾಂಗ್ಲಾಕ್ಕೆ ಹೋಗಲಿ; ಬಸನಗೌಡ ಯತ್ನಾಳ್ ವಾಗ್ದಾಳಿ