ಲೂಟಿಗಳಿಂದ ಖಜಾನೆ ಖಾಲಿಯಾಗಿದೆ, ಗ್ಯಾರಂಟಿ ಯೋಜನೆಗಳಿಂದಲ್ಲ: ಹೆಚ್ ಡಿ ಕುಮಾರಸ್ವಾಮಿ

ಲೂಟಿಗಳಿಂದ ಖಜಾನೆ ಖಾಲಿಯಾಗಿದೆ, ಗ್ಯಾರಂಟಿ ಯೋಜನೆಗಳಿಂದಲ್ಲ: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 23, 2024 | 12:45 PM

ರಾಜ್ಯದ ಬೊಕ್ಕಸ ಖಾಲಿಯಾಗಿಲ್ಲ, ಸ್ವಂತ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ನಮ್ಮದು ಒಂದು ಸಂಪದ್ಭರಿತ ರಾಜ್ಯ, ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಲಾರದು, ಇವರು ಲೂಟಿ ಹೊಡೆದು ಖಜಾನೆ ಖಾಲಿ ಮಾಡಿದ್ದಾರೆ, ಸರ್ಕಾರದ ಸ್ವೇಚ್ಛಾಚಾರದಿಂದಾಗಿ ಅದು ಬರಿದಾಗಿದೆ ಎಂದು ಕುಮಾರಸ್ವಾಮಿ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಬೆಂಗಳೂರು: ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿಯವರಿಗೆ (HD Kumaraswamy) ಗಂಟಲಿನ ಸಮಸ್ಯೆ ಇದ್ದು ವೈದ್ಯರು ಗಂಟಲಿಗೆ ರೆಸ್ಟ್ ಬೇಕು ಹೆಚ್ಚು ಮಾತಾಡಬೇಡಿ ಅಂತ ಸಲಹೆ ನೀಡಿರುವ ಕಾರಣ ವಿಧಾನಸಭೆಯ ಕಾರ್ಯಕಲಾಪಗಳಲ್ಲಿ (Assembly session) ಭಾವಹಿಸುತ್ತಿಲ್ಲವಂತೆ. ವಿಧಾನಸೌಧದ ಬಳಿ ಒಲ್ಲ್ಲದ ಮನಸ್ಸಿನಿಂದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಮೊನ್ನೆ ವಿಧಾನ ಪರಿಷತ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddaramaiah) ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರಿಗೆ ಅಮ್ಮಾ ತಾಯಿ, ಅನುದಾನ ನೀಡಿ ಅಂತ ಹೇಳಿದ್ದನ್ನು ಲೇವಡಿ ಮಾಡಿದರು ಮತ್ತು ಛೇಡಿಸಿದರು. ನಿರ್ಗತಿಕರ ಹಾಗೆ ಬೇಡುವ ದೈನೇಸಿ ಸ್ಥಿತಿ ಒಬ್ಬರ ರಾಜ್ಯದ ಮುಖ್ಯಮಂತ್ರಿಗೆ ಬರಬಾರದಿತ್ತು. ರಾಜ್ಯದ ಬೊಕ್ಕಸ ಖಾಲಿಯಾಗಿಲ್ಲ, ಸ್ವಂತ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ನಮ್ಮದು ಒಂದು ಸಂಪದ್ಭರಿತ ರಾಜ್ಯ, ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಲಾರದು, ಇವರು ಲೂಟಿ ಹೊಡೆದು ಖಜಾನೆ ಖಾಲಿ ಮಾಡಿದ್ದಾರೆ, ಸರ್ಕಾರದ ಸ್ವೇಚ್ಛಾಚಾರದಿಂದಾಗಿ ಅದು ಬರಿದಾಗಿದೆ ಎಂದು ಕುಮಾರಸ್ವಾಮಿ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ