ಮಧುಗಿರಿಯನ್ನು ಜಿಲ್ಲಾ ಕೇಂದ್ರ ಘೋಷಿಸಲು ಸರ್ಕಾರದ ಬಳಿ ಹಣವಿಲ್ಲ: ಸಿದ್ದರಾಮಯ್ಯ, ಮುಖ್ಯಮಂತ್ರಿ

|

Updated on: Sep 06, 2023 | 6:42 PM

ಕೇಂದ್ರ ಸರ್ಕಾರ ಕೂಡಲೇ ಭದ್ರಾ ಮೇಲ್ದಂಡೆ ಯೋಜನೆಯನ್ನು ಒಂದು ರಾಷ್ಟ್ರೀಯ ಯೋಜನೆ ಅಂತ ಘೋಷಿಸಿ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸುವುದಾಗಿ ಸಿದ್ದರಾಮಯ್ಯ ಹೇಳಿದರು. ಕೇಂದ್ರ ಸರ್ಕಾರ ಅನುದಾನ ನೀಡದಿದ್ದರೂ ತಮ್ಮ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಳಿಸಲು ಬದ್ಧವಾಗಿ ಎಂದ ಮುಖ್ಯಮಂತ್ರಿ, ಕಾಮಗಾರಿ ಈಗಾಗಲೇ ಆರಂಭಗೊಂಡಿದೆ ಅಂತ ಹೇಳಿದರು.

ತುಮಕೂರು: ರಾಜ್ಯ ಬೊಕ್ಕಸ ಬರಿದಾಗಿದೆ ಅನ್ನೋದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಜಿಲ್ಲೆಯ ಮಧುಗಿರಿಯಲ್ಲಿ ಅಂಗೀಕರಿಸಿದರು. ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮ ಆಚರಿಸಲು ಇಂದು ಮಧುಗಿರಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತಾಡಿದ ಸಿದ್ದರಾಮಯ್ಯ, ಮಧುಗಿರಿಯನ್ನು (Madhugiri) ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಜಿ ಪರಮೇಶ್ವರ್ ಮತ್ತು ಕೆಎನ್ ರಾಜಣ್ಣ ಆಗ್ರಹಿಸುತ್ತಿದ್ದಾರೆ. ಅದರೆ ಅದು ಸುಲಭವಾಗಿ ಆಗುವಂಥದಲ್ಲ, ದೊಡ್ಡ ಪ್ರಮಾಣದಲ್ಲಿ ಹಣ ಬೇಕಾಗುತ್ತದೆ, ಸರ್ಕಾರದಲ್ಲಿ ಈಗ ಅಷ್ಟೆಲ್ಲ ಹಣವಿಲ್ಲ ಎಂದು ಹೇಳಿದರು. ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ (Upper Bhadra project) ಈ ಬಾರಿಯ ಬಜೆಟ್ ನಲ್ಲಿ ರೂ. 5,300 ಕೋಟಿ ಘೋಷಿಸಿದ್ದರೂ ಇದುವರೆಗೆ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ ಅಂತ ಹೇಳಿದರು. ಕೇಂದ್ರ ಸರ್ಕಾರ ಕೂಡಲೇ ಭದ್ರಾ ಮೇಲ್ದಂಡೆ ಯೋಜನೆಯನ್ನು ಒಂದು ರಾಷ್ಟ್ರೀಯ ಯೋಜನೆ ಅಂತ ಘೋಷಿಸಿ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸುವುದಾಗಿ ಸಿದ್ದರಾಮಯ್ಯ ಹೇಳಿದರು. ಕೇಂದ್ರ ಸರ್ಕಾರ ಅನುದಾನ ನೀಡದಿದ್ದರೂ ತಮ್ಮ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಳಿಸಲು ಬದ್ಧವಾಗಿ ಎಂದ ಮುಖ್ಯಮಂತ್ರಿ, ಕಾಮಗಾರಿ ಈಗಾಗಲೇ ಆರಂಭಗೊಂಡಿದೆ ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ