BBMPಗೆ ನೂತನ ಆಯುಕ್ತರ ನೇಮಕ: ಕೊರೋನಾ ಸಂಕಷ್ಟದಲ್ಲಿ ಒಂದೇ ಅಧಿಕಾರಿಗೆ 3 ಜವಾಬ್ದಾರಿ

[lazy-load-videos-and-sticky-control id=”17vBFi1RN88″] ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಪ್ರಕರಣ ದಿನೇ ದಿನೇ ಹೆಚ್ಚುತ್ತಲೆ ಇದ್ದು, ಕೊರೊನಾ ನಿಯಂತ್ರಣಕ್ಕೆ ತರುವಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಸಂಪೂರ್ಣ ವಿಫಲವಾಗಿದೆ. ಇದರಿಂದ ರಾಜ್ಯ ಸರ್ಕಾರ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್​ರನ್ನ ವರ್ಗಾವಣೆ ಮಾಡುವ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಂಡಿದೆ. ಬೆಂಗಳೂರಲ್ಲಿ ಕೋವಿಡ್ ನಿರ್ವಹಣಾ ವಿಚಾರದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣಕ್ಕೆ ಕೊವಿಡ್ ಟಾಸ್ಕ್ ಪೋರ್ಸ್ ಮುಖ್ಯಸ್ಥ ಹಾಗೂ ಆಯುಕ್ತರಾಗಿರುವ ಅನಿಲ್ ಕುಮಾರ್​ರನ್ನ ವರ್ಗಾವಣೆ ಮಾಡಿ ಅವರ ಜಾಗಕ್ಕೆ ಹಾಲಿ ಕಂದಾಯ ಇಲಾಖೆ […]

BBMPಗೆ ನೂತನ ಆಯುಕ್ತರ ನೇಮಕ: ಕೊರೋನಾ ಸಂಕಷ್ಟದಲ್ಲಿ ಒಂದೇ ಅಧಿಕಾರಿಗೆ 3 ಜವಾಬ್ದಾರಿ
Follow us
ಸಾಧು ಶ್ರೀನಾಥ್​
|

Updated on:Jul 18, 2020 | 3:55 PM

[lazy-load-videos-and-sticky-control id=”17vBFi1RN88″]

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಪ್ರಕರಣ ದಿನೇ ದಿನೇ ಹೆಚ್ಚುತ್ತಲೆ ಇದ್ದು, ಕೊರೊನಾ ನಿಯಂತ್ರಣಕ್ಕೆ ತರುವಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಸಂಪೂರ್ಣ ವಿಫಲವಾಗಿದೆ. ಇದರಿಂದ ರಾಜ್ಯ ಸರ್ಕಾರ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್​ರನ್ನ ವರ್ಗಾವಣೆ ಮಾಡುವ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಂಡಿದೆ.

ಬೆಂಗಳೂರಲ್ಲಿ ಕೋವಿಡ್ ನಿರ್ವಹಣಾ ವಿಚಾರದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣಕ್ಕೆ ಕೊವಿಡ್ ಟಾಸ್ಕ್ ಪೋರ್ಸ್ ಮುಖ್ಯಸ್ಥ ಹಾಗೂ ಆಯುಕ್ತರಾಗಿರುವ ಅನಿಲ್ ಕುಮಾರ್​ರನ್ನ ವರ್ಗಾವಣೆ ಮಾಡಿ ಅವರ ಜಾಗಕ್ಕೆ ಹಾಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಮಂಜುನಾಥ್ ಪ್ರಸಾದ್ ರವರನ್ನು ನೂತನ ಬಿಬಿಎಂಪಿ ಆಯುಕ್ತರಾಗಿ ನೇಮಕಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಕೊರೋನಾ ಸಂಕಷ್ಟದಲ್ಲಿ ಒಂದೇ ಅಧಿಕಾರಿಗೆ 3 ಜವಾಬ್ದಾರಿ ನೀಡಿರುವ ಸರ್ಕಾರದ ನಡೆ ತೀವ್ರ ಕುತೂಹಲ ಉಂಟುಮಾಡಿದೆ.

ಆರಂಭದಲ್ಲಿ ಬಿಬಿಎಂಪಿ ಆಯುಕ್ತ ಹುದ್ದೆಯನ್ನು ಬಿ.ಎಚ್. ಅನಿಲ್ ಕುಮಾರ್ ರವರಿಗೆ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಮಂಜುನಾಥ್ ಪ್ರಸಾದ್ ರವರಿಗೆ, ಹಾಗೂ ವಿಪತ್ತು‌ ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಟಿ.ಕೆ.‌ ಅನಿಲ್ ಕುಮಾರ್ ರವರಿಗೆ ರಾಜ್ಯ ಸರ್ಕಾರ ನೀಡಿತ್ತು. ನಂತರದ ದಿನಗಳಲ್ಲಿ ಮಂಜುನಾಥ್ ಪ್ರಸಾದ್ ರವರಿಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜೊತೆಗೆ ವಿಪತ್ತು‌ ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜವಬ್ದಾರಿಯನ್ನು ಹೊರಿಸಿತ್ತು. ಈಗ ಈ ಎರಡು ಹುದ್ದೆಗಳ ಜೊತೆಗೆ ಬಿಬಿಎಂಪಿ ಆಯುಕ್ತರನ್ನಾಗಿ ಮಂಜುನಾಥ್ ಪ್ರಸಾದ್ ರವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Published On - 1:32 pm, Sat, 18 July 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ