Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಎಂದು ವಿಜಯೇಂದ್ರ ಹೇಳಿದ ಮಾತಿನ ಅರ್ಥವೇನು?

ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಎಂದು ವಿಜಯೇಂದ್ರ ಹೇಳಿದ ಮಾತಿನ ಅರ್ಥವೇನು?

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 10, 2024 | 2:09 PM

ಬಿಜೆಪಿ ರಾಜ್ಯ ಘಟಕದಲ್ಲಿ ಸದಾ ಹೆಡೆಯೆತ್ತುತ್ತಿರುವ ಅಸಮಾಧಾನಗಳ ಬಗ್ಗೆ ಮಾತಾಡಿದ ವಿಜಯೇಂದ್ರ, ಪಕ್ಷದ ಹಿರಿಯ ನಾಯಕರೊಂದಿಗೆ ಹೊಂದಾಣಿಕೆಯ ಸಮಸ್ಯೆ ಇದೆ, ಅವರೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪಕ್ಷದ ವರಿಷ್ಠರಿಂದ ಸಮಯ ಕೇಳಿರುವುದಾಗಿ ಹೇಳಿದರು.

ಬೆಳಗಾವಿ: ಮುಂಬರುವ ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯ ಕ್ಷಿಪ್ರ ಬೆಳವಣಿಗೆಗಳಿಗೆ ಸಾಕ್ಷಿಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿರುವ ಹುಕ್ಕೇರಿ ಹಿರೇಮಠಕ್ಕೆ ಭೇಟಿ ನೀಡಿ ಮಠದಲ್ಲಿ ಆಯೋಜಿಸಿದ ಚಂಡಿಕಾ ಹೋಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ತ್ಯಜಿಸಲಿದ್ದಾರೆಂದು ಹೇಳಲಿಲ್ಲವಾದರೂ ಅವರ ಮಾತಿನ ಇಂಗಿತ ಅದೇ ಆಗಿತ್ತು ಅನ್ನೋದು ಸುಳ್ಳಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದೇಶವು ‘ಜಗತ್ ಒಂದೇ ಭಾರತ್’ ಧ್ಯೇಯದೊಂದಿಗೆ ಸಾಗುತ್ತಿದೆ, ಎಲ್ಲರೂ ಬಿಜೆಪಿ ಸದಸ್ಯರಾಗಿ ಎಂದ ಬಿವೈ ವಿಜಯೇಂದ್ರ