ಅಶ್ಲೀಲ ಹಾಡು: ‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ

Edited By:

Updated on: Mar 17, 2026 | 7:44 PM

ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ’ ಹಾಡು ವಿವಾದಕ್ಕೆ ಗುರಿ ಆಗಿದೆ. ಅಶ್ಲೀಲ ಸಾಹಿತ್ಯ ಹೊಂದಿರುವ ಕಾರಣಕ್ಕೆ ಈ ಹಾಡನ್ನು ವಿರೋಧಿಸಲಾಗುತ್ತಿದೆ. ಅನೇಕ ಕಡೆಗಳಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮಾತನಾಡಿದ್ದಾರೆ.

ಧ್ರುವ ಸರ್ಜಾ, ಸಂಜಯ್ ದತ್, ನೋರಾ ಫತೇಹಿ ಮುಂತಾದವರು ನಟಿಸಿರುವ ‘ಕೆಡಿ’ (KD Movie) ಸಿನಿಮಾದ ‘ಸರ್ಸೆ ನಿನ್ನ ಸೆರಗ’ ಹಾಡು ವಿವಾದಕ್ಕೆ ಗುರಿ ಆಗಿದೆ. ಅಶ್ಲೀಲ ಸಾಹಿತ್ಯ ಹೊಂದಿರುವ ಕಾರಣಕ್ಕೆ ಈ ಹಾಡನ್ನು ವಿರೋಧಿಸಲಾಗುತ್ತಿದೆ. ‘ಕೆಡಿ’ ಚಿತ್ರತಂಡಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಅನೇಕ ಕಡೆಗಳಲ್ಲಿ ದೂರು ಕೂಡ ದಾಖಲಾಗಿದೆ. ಈ ಬಗ್ಗೆ ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ (Nagalakshmi Choudhary) ಅವರು ಮಾತನಾಡಿದ್ದಾರೆ. ‘ಹೆಣ್ಮಕ್ಕಳು ಅನುಭವಿಸುತ್ತಿರುವ ಪರಿಸ್ಥಿತಿ ಬಹಳ ಕಷ್ಟ ಇದೆ. ಇಂಥ ಹಾಡುಗಳು ಬಂದರೆ ಇನ್ನೂ ಹಗುರವಾಗಿ ಮಾತನಾಡಲು ಶುರು ಮಾಡುತ್ತಾರೆ. ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಸೆನ್ಸಾರ್ ಮಂಡಳಿಗೆ ಪತ್ರ ಬರೆದು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇವೆ. ಆ ಹಾಡನ್ನು ಕೇಳಲು ನನಗೆ ಸಾಧ್ಯವಾಗಲಿಲ್ಲ. ಆರಂಭದ ಕೆಲವು ಸಾಲುಗಳನ್ನು ಕೇಳುವಾಗಲೇ ಮುಜುಗರ ಆಯಿತು’ ಎಂದು ನಾಗಲಕ್ಷ್ಮಿ ಚೌಧರಿ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Mar 17, 2026 07:44 PM
Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More