ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ; ತಳಿರು ತೋರಣಗಳಿಂದ ಕಂಗೊಳಿಸುತ್ತಿರುವ ಎಕ್ಸಾಮ್ ಸೆಂಟರ್
ಶಾಲೆಯ ಮುಖ್ಯದ್ವಾರದಲ್ಲಿ ವಿದ್ಯಾರ್ಥಿಗಳನ್ನ ಬರಮಾಡಿಕೊಳ್ಳಲು ತಳಿರು ತೋರಣಗಳನ್ನ ಕಟ್ಟಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಶಾಲಾ ಆಡಳಿತ ಮಂಡಳಿ ಸರ್ಕಲ್ ಹಾಕಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಜಾರಿ ಕೂಡ ಮಾಡಲಾಗಿದೆ.
ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ (SSLC Exam) ಆರಂಭವಾಗಿದೆ. 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು (Students) ಪರೀಕ್ಷೆ ಬರೆಯಲಿದ್ದಾರೆ. ಈ ಹಿನ್ನೆಲೆ ನಗರದ ಮಲ್ಲೇಶ್ವರಂ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಶಾಲೆಯ ಮುಖ್ಯದ್ವಾರದಲ್ಲಿ ವಿದ್ಯಾರ್ಥಿಗಳನ್ನ ಬರಮಾಡಿಕೊಳ್ಳಲು ತಳಿರು ತೋರಣಗಳನ್ನ ಕಟ್ಟಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಶಾಲಾ ಆಡಳಿತ ಮಂಡಳಿ ಸರ್ಕಲ್ ಹಾಕಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಜಾರಿ ಕೂಡ ಮಾಡಲಾಗಿದೆ. ಕೊವಿಡ್ ರೂಲ್ಸ್ ಬಗ್ಗೆ ಬ್ಯಾನರ್ ಹಾಕಿರೋ ಶಾಲಾ ಆಡಳಿತ ಮಂಡಳಿ, ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಮತ್ತು ಸ್ಯಾನಿಟೇಸ್ ಮಾಡಿಕೊಂಡು ಪರೀಕ್ಷೆ ಹಾಲ್ಗೆ ತೆರಳಬೇಕು ಎಂದು ಬ್ಯಾನರ್ನಲ್ಲಿ ತಿಳಿಸಲಾಗಿದೆ. ಯಾವುದೇ ರೀತಿಯಲ್ಲಿ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗದೆ ಉತ್ತಮ ರೀತಿಯಲ್ಲಿ ಪರೀಕ್ಷೆಯನ್ನು ಬರೆಯಲು ಸಹಕಾರಿಯಾಗಿದೆ.
ಇದನ್ನೂ ಓದಿ:
ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು: ಹೆಚ್ಡಿ ಕುಮಾರಸ್ವಾಮಿ