ನಿಂಗೆ ಇನ್ನೂ ಸಹ 12 ಎಸೆತಗಳಲ್ಲಿ ಅರ್ಧಶತಕ ಪೂರೈಸಲು ಸಾಧ್ಯವಾಗ್ತಿಲ್ಲ, ಅಲ್ವಾ.!
ಈ ಪಂದ್ಯದಲ್ಲಿ ಕೇವಲ 20 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ ಅಜೇಯ 68 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ನೊಂದಿಗೆ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ನೀಡಿದ 154 ರನ್ಗಳ ಗುರಿಯನ್ನು ಟೀಮ್ ಇಂಡಿಯಾ 10 ಓವರ್ಗಳಲ್ಲಿ ಚೇಸ್ ಮಾಡಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಅಬ್ಬರದೊಂದಿಗೆ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಯುವರಾಜ್ ಸಿಂಗ್ ಬಳಿಕ ಟೀಮ್ ಇಂಡಿಯಾ ಪರ ಅತೀ ವೇಗದ ಅರ್ಧಶತಕ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.
ಅಭಿಷೇಕ್ ಶರ್ಮಾ ಅವರ ಈ ಪ್ರಚಂಡ ಬ್ಯಾಟಿಂಗ್ ಬೆನ್ನಲ್ಲೇ ಗುರು ಯುವರಾಜ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಮೂಲಕ ಯುವಿ ತನ್ನ ಶಿಷ್ಯನ ಕಾಲೆಳೆದಿದ್ದಾರೆ.
14 ಎಸೆತಗಳಲ್ಲಿ ಅಭಿಷೇಕ್ ಶರ್ಮಾ ಅರ್ಧಶತಕ ಪೂರೈಸುತ್ತಿದ್ದಂತೆ ಟ್ವೀಟ್ ಮಾಡಿರುವ ಯುವರಾಜ್ ಸಿಂಗ್, ನಿಂಗೆ ಇನ್ನೂ ಸಹ 12 ಎಸೆತಗಳಲ್ಲಿ 50 ರನ್ ಬಾರಿಸಲು ಸಾಧ್ಯವಾಗುತ್ತಿಲ್ಲ, ಅಲ್ವಾ? ಎಂದು ಕಾಲೆಳೆದಿದ್ದಾರೆ.
ಇದಾಗ್ಯೂ ಅದ್ಭುತವಾಗಿ ಆಡಿದ್ದೀರಿ ಎಂದು ಪ್ರಶಂಸೆ ವ್ಯಕ್ತಪಡಿಸಿರುವ ಯುವರಾಜ್ ಸಿಂಗ್, ಇದೇ ರೀತಿ ಮುಂದುವರೆಯಿರಿ ಎಂದು ಹಾರೈಸಿದ್ದಾರೆ.
ಅಂದರೆ ಇಲ್ಲಿ ಯುವರಾಜ್ ಸಿಂಗ್ ತನ್ನ ಶಿಷ್ಯನೇ 12 ಎಸೆತಗಳ ಅರ್ಧಶತಕದ ದಾಖಲೆ ಮುರಿಯುವುದನ್ನು ಎದುರು ನೋಡುತ್ತಿದ್ದಾರೆ. ಅತ್ತ ಅಭಿಷೇಕ್ ಶರ್ಮಾ ಕೂಡ 12 ಎಸೆತಗಳ ಅರ್ಧಶತಕದ ದಾಖಲೆ ಮುರಿಯುತ್ತೇನೆ ಎಂದಿರುವ ಸಾಧ್ಯತೆ ಇದೆ. ಹೀಗಾಗಿಯೇ ಯುವರಾಜ್ ಸಿಂಗ್ ಇನ್ನೂ ಸಹ 12 ಎಸೆತಗಳಲ್ಲಿ 50 ರನ್ ಬಾರಿಸಲು ಸಾಧ್ಯವಾಗುತ್ತಿಲ್ಲ ಅಲ್ವಾ ಎಂದು ಅಭಿಷೇಕ್ ಶರ್ಮಾ ಅವರನ್ನು ಕಿಚಾಯಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಕೇವಲ 20 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ ಅಜೇಯ 68 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ನೊಂದಿಗೆ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ನೀಡಿದ 154 ರನ್ಗಳ ಗುರಿಯನ್ನು ಟೀಮ್ ಇಂಡಿಯಾ 10 ಓವರ್ಗಳಲ್ಲಿ ಚೇಸ್ ಮಾಡಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.

