AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಸಂಚಲನ: ರಾಜಕಾರಣಿಗಳಿಗೆ ಕಿವಿಮಾತು ಹೇಳಿದ ಜೋಶಿ

ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಸಂಚಲನ: ರಾಜಕಾರಣಿಗಳಿಗೆ ಕಿವಿಮಾತು ಹೇಳಿದ ಜೋಶಿ

ಅಶೋಕ್​ ಪೂಜಾರಿ
| Edited By: |

Updated on: Oct 18, 2026 | 7:43 PM

Share

ಮುಖ್ಯಾಂಶಗಳು

  • ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆರೋಪ ಪ್ರಕರಣ
  • ಸ್ಟಿಂಗ್ ಹಿಂದಿರುವ ಆರೋಪಿಗಳನ್ನ ಎಸ್ಐಟಿ ಬಂಧಿಸಲೇಬೇಕು ಎಂದ ಜೋಶಿ
  • ಕಾರವಾರದಲ್ಲಿ ಕೇಂದ್ರ ಆಹಾರ ಸಚಿವ ಪ್ರಲ್ಹಾದ್​ ಜೋಶಿ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಕಾರ್ಯಾಚರಣೆಯನ್ನು ಖಂಡಿಸಿದ್ದಾರೆ. ಇಂತಹ ಬೆಳವಣಿಗೆ ಸುಸಂಸ್ಕೃತ ರಾಜಕಾರಣಕ್ಕೆ ಒಳ್ಳೆಯದಲ್ಲ ಎಂದು ಹೇಳಿದ್ದು, ಸ್ಟಿಂಗ್ ಹಿಂದೆ ಇರುವವರನ್ನು ಎಸ್‌ಐಟಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಜಕಾರಣದಲ್ಲಿ ನೈತಿಕತೆ ಅತಿ ಮುಖ್ಯ ಎಂದು ಪ್ರತಿಪಾದಿಸಿದ್ದಾರೆ.

ಕಾರವಾರ, ಅಕ್ಟೋಬರ್​​ 18: ‘ಸಿದ್ದರಾಮಯ್ಯನವರಿಗೆ ಸ್ಟಿಂಗ್ ಆಪರೇಷನ್ ಮಾಡಿ ವಿಡಿಯೋ ತೋರಿಸಿ ಸಿಎಂ ಸ್ಥಾನದಿಂದ ಇಳಿಸಿದ್ದಾರೆ ಎನ್ನುವುದು ಶಾಕಿಂಗ್ ನ್ಯೂಸ್ ಆಗಿದೆ. ಸುಸಂಸ್ಕೃತ ರಾಜಕಾರಣಕ್ಕೆ ಇಂತಹ ಬೆಳವಣಿಗೆ ಒಳ್ಳೆಯದಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆರೋಪ ಪ್ರಕರಣ ವಿಚಾರವಾಗಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ‘ನನಗೂ ಸಿದ್ದರಾಮಯ್ಯನವರಿಗೂ ಸೈದ್ಧಾಂತಿಕ ಭಿನ್ನಾಭಿಪ್ರಾಯ ಇದೆ. ಆದರೆ ಹಿರಿಯ ನಾಯಕರ ಮೇಲೆ ಸ್ಟಿಂಗ್​ ಮಾಡುವಂಥದ್ದು ಒಪ್ಪುವುದಲ್ಲ. ಸ್ಟಿಂಗ್ ಆಪರೇಷನ್ ಆಗಿ ಸಿಕ್ಕಿಕೊಳ್ಳುವವರ ವೀಕ್ನೆಸ್​ ಇರಬೇಕಲ್ಲ. ಕರ್ನಾಟಕದಲ್ಲಿ ಸ್ಟಿಂಗ್ ಆಪರೇಷನ್​ ರೀತಿ ಬಹಳ ಘಟನೆ ನಡೆದಿದೆ. ರಾಜಕಾರಣಿಗಳು ಸಿಕ್ಕಿಹಾಕಿಕೊಳ್ಳುವುದಕ್ಕೆ ಅನೈತಿಕ ಕೆಲಸ ಮಾಡಬಾರದು. ರಾಜಕಾರಣಿಗಳಾದ ನಮ್ಮನ್ನು ನಾಯಕರನ್ನಾಗಿ ಬಯಸುತ್ತಾರೆ, ಆದರೆ ರಾಜಕಾರಣಿಗಳು ಯಾಕೆ ಇಂತಹ ಪರಿಸ್ಥಿತಿ ತಂದುಕೊಳ್ಳುತ್ತಾರೆ’ ಎಂದು ಕಿವಿಮಾತು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More