ಸ್ಟಿಂಗ್ ಆಪರೇಷನ್: ನೋಟಿಸ್​​ ಬೆನ್ನಲ್ಲೇ ಸಿಸಿಬಿ ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?

Edited By:

Updated on: Nov 09, 2026 | 2:44 PM

ಮುಖ್ಯಾಂಶಗಳು

  • ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಆರೋಪ
  • ಸಿಸಿಬಿ ಸೈಬರ್ ಪೊಲೀಸರ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
  • ಅಧಿಕೃತವಾಗಿ ಹೇಳಿಕೆ ಕೊಡಲು ಬಂದಿದ್ದಾರೆ ಎಂದ ಅವರ ಪರ ವಕೀಲೆ

ಬೆಂಗಳೂರಿನ ಸಿಸಿಬಿ ಸೈಬರ್ ಪೊಲೀಸ್ ಕಚೇರಿಯಲ್ಲಿ ಕೃಪಾ ಆಳ್ವಾ ವಿಚಾರಣೆಗೆ ಹಾಜರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟಿಸ್ ನೀಡಿತ್ತು. ವಿಚಾರಣೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ ಕೃಪಾ, ನಂತರ ಮಾತನಾಡುವುದಾಗಿ ತಿಳಿಸಿದ್ದಾರೆ.

ಬೆಂಗಳೂರು, ನವೆಂಬರ್​​ 09: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್​ ಆಪರೇಷನ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​​ ಬೆನ್ನಲ್ಲೇ ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ಕೃಪಾ ಆಳ್ವಾ ಹಾಜರಾಗಿದ್ದಾರೆ. ಈ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ‘ಮೊದಲು ಕಾರ್ಯವಿಧಾನ ಮುಗಿಯಲಿ. ಆನಂತರ ಮಾತನಾಡುತ್ತೇನೆ’ ಎಂದು ಹೇಳಿದ್ದಾರೆ. ಇನ್ನು ಈ ವೇಳೆ ಕೃಪಾ ಆಳ್ವಾ ಪರ ವಕೀಲೆ ನಿಖಿತಾ ಪ್ರತಿಕ್ರಿಯಿಸಿದ್ದು, ‘ಪ್ರಕರಣ ಸಂಬಂಧ ಈಗಾಗಲೇ ಕೃಪಾ ಆಳ್ವಾ ಹೇಳಿಕೆ ದಾಖಲಿಸಿದ್ದಾರೆ. ಈಗ ಮತ್ತೊಮ್ಮೆ ವಿಚಾರಣೆಗೆ ಬರಲು ಹೇಳಿದ್ದಕ್ಕೆ ಅಧಿಕೃತವಾಗಿ ಹೇಳಿಕೆ ಕೊಡಲು ಬಂದಿದ್ದಾರೆ. ಈಗಾಗಲೇ ಡಿಸಿಪಿ ಎದುರು ಎರಡು ಸಾರಿ ಹೇಳಿಕೆ ನೀಡಿದ್ದರು’ ಎಂದು ಮಾಹಿತಿ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More