ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಫೈವ್​ ಸ್ಟಾರ್ ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಸ್ವಾಮಿ

Edited By:

Updated on: Oct 11, 2026 | 8:34 PM

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಾರ್​ ತಾರಕಕ್ಕೇರಿದೆ. ದಿನಕ್ಕೊಬ್ಬರಿಂದ ಆರೋಪ, ಪ್ರತ್ಯಾರೋಪ ಜೋರಾಗ್ತಿದೆ. ಸ್ಟಿಂಗ್ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ಕೊಟ್ಟಿರೋದಕ್ಕೆ ವಿಪಕ್ಷ ನಾಯಕರು ತಮ್ಮದೇ ಆದ ವ್ಯಾಖ್ಯಾನ ಮಾಡ್ತಿದ್ದಾರೆ. ಅದರಲ್ಲೂ ಸಿಎಂ ಡಿಕೆಶಿಯನ್ನೇ ಟಾರ್ಗೆಟ್ ಮಾಡಿ ಹೆಚ್​ಡಿಕೆ ಕಿಡಿಕಾರ್ತಿದ್ದಾರೆ. ಸ್ಟಿಂಗ್ ಮಾಡಿರೋ ವ್ಯಕ್ತಿ ಯಾರು? ಸಿಎಂ ಅವರನ್ನು ಇನ್ನೂ ಯಾಕೆ ಮೌನಕ್ಕೆ ಶರಣಾಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​ಡಿಕೆ ಪಶ್ನೆ ಮಾಡಿದ್ದಾರೆ .

ಬೆಂಗಳೂರು, (ಅಕ್ಟೋಬರ್ 11): ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಾರ್​ ತಾರಕಕ್ಕೇರಿದೆ. ದಿನಕ್ಕೊಬ್ಬರಿಂದ ಆರೋಪ, ಪ್ರತ್ಯಾರೋಪ ಜೋರಾಗ್ತಿದೆ. ಸ್ಟಿಂಗ್ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ಕೊಟ್ಟಿರೋದಕ್ಕೆ ವಿಪಕ್ಷ ನಾಯಕರು ತಮ್ಮದೇ ಆದ ವ್ಯಾಖ್ಯಾನ ಮಾಡುತ್ತಿದ್ದಾರೆ. ಅದರಲ್ಲೂ ಸಿಎಂ ಡಿಕೆಶಿಯನ್ನೇ ಟಾರ್ಗೆಟ್ ಮಾಡಿ ಹೆಚ್​ಡಿಕೆ ಕಿಡಿ ಕಾರುತ್ತಿದ್ದಾರೆ. ಸ್ಟಿಂಗ್ ಮಾಡಿರೋ ವ್ಯಕ್ತಿ ಯಾರು? ಸಿಎಂ ಅವರನ್ನು ಇನ್ನೂ ಯಾಕೆ ಮೌನಕ್ಕೆ ಶರಣಾಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​ಡಿಕೆ ಪಶ್ನೆ ಮಾಡಿದ್ದಾರೆ .

ಅಷ್ಟೇ ಅಲ್ಲದೇ ಸ್ಟಿಂಗ್ ಆಪರೇಷನ್ ಬಗ್ಗೆ ಗಂಭೀರ ಆರೋಪ ಮಾಡಿರೋ ಹೆಚ್​ಡಿಕೆ, ಹೋಟೆಲ್​​ವೊಂದರಲ್ಲಿ ಸ್ಟಿಂಗ್ ಮಾಡೋನ ಜೊತೆ ಎಷ್ಟು ಹೊತ್ತು ಕುಳಿತಿದ್ರಿ? ಆ ವ್ಯಕ್ತಿ ಯಾರು ಅನ್ನೋದು ಜನರ ಮುಂದೆ ಇಡ್ಬೇಕು ಅಲ್ವಾ? ಈ ಬಗ್ಗೆ ತನಿಖೆ ಆಗಬೇಕು? ಯಾರು ಆ 5 ಜನ ಗೊತ್ತಾಗ್ಬೇಕು? ಟ್ರ್ಯಾಪ್ ಆದ ಶಾಸಕರನ್ನ ಸಂಪುಟದಲ್ಲಿ ಯಾಕೆ ಇಟ್ಕೊಂಡಿದ್ದೀರಿ ಅಂತೆಲ್ಲಾ ವಾಗ್ದಾಳಿ ನಡೆಸಿದ್ದಾರೆ.

Published on: Oct 11, 2026 08:33 PM
Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More