AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಿಂಗ್ ಆಪರೇಷನ್ ಕದನಕ್ಕೆ ಶೋಷಿತ ವರ್ಗಗಳ ಒಕ್ಕೂಟ ಎಂಟ್ರಿ: ಜಿಲ್ಲೆ ಜಿಲ್ಲೆಯಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ ಎಂದ ರಾಮಚಂದ್ರಪ್ಪ

ಸ್ಟಿಂಗ್ ಆಪರೇಷನ್ ಕದನಕ್ಕೆ ಶೋಷಿತ ವರ್ಗಗಳ ಒಕ್ಕೂಟ ಎಂಟ್ರಿ: ಜಿಲ್ಲೆ ಜಿಲ್ಲೆಯಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ ಎಂದ ರಾಮಚಂದ್ರಪ್ಪ

ಅನಿಲ್​ ಕಲ್ಕೆರೆ
| Edited By: |

Updated on: Oct 16, 2026 | 10:44 PM

Share

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶೋಷಿತ ವರ್ಗಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ, ಸರ್ಕಾರದಲ್ಲಿನ ಮುಖ್ಯವಾದವರೇ ಸ್ಟಿಂಗ್ ಆಪರೇಷನ್‌ನಲ್ಲಿ ಭಾಗಿಯಾಗಿದ್ದಾರೆ. ತನಿಖೆ ಮಾಡಬೇಕೆಂದು ಸಿದ್ದರಾಮಯ್ಯನವರು ದೂರು ಕೊಟ್ಟಿದ್ದಾರೆ. ತನಿಖೆ ಹೇಗೆ ನಡೆಯುತ್ತೆ ಅಂತಾ ಒಂದು ವಾರ ಕಾದು ನೋಡುತ್ತೇವೆ. ಸಿದ್ದರಾಮಯ್ಯನವರ ಮರ್ಯಾದೆ ತೆಗೆದವರಿಗೆ ಪಾಠ ಕಲಿಸಬೇಕು. ಸ್ಟಿಂಗ್ ಆಪರೇಷನ್ ಹಿಂದೆ ಇರುವ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಒಂದು ವೇಳೆ ತನಿಖೆ ಆಗದೆ ಇದ್ರೆ ಜಿಲ್ಲೆ ಜಿಲ್ಲೆಯಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ ಎಂದು ಎಚ್ಚರಿಸಿದ್ದಾರೆ.

ಬೆಂಗಳೂರು, (ಅಕ್ಟೋಬರ್ 16): ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ.ಸ್ಟಿಂಗ್ ಆಪರೇಷನ್ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಸ್ಟಿಂಗ್ ಆಪರೇಷನ್ ಕದನದಲ್ಲಿ ಶೋಷಿತ ವರ್ಗಗಳ ಒಕ್ಕೂಟ ಪ್ರವೇಶ ಮಾಡಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿದೆ. ಈ ಸ್ಟಿಂಗ್ ಆಪರೇಷನ್​​ನಲ್ಲಿ ಸಿದ್ದರಾಮಯ್ಯನವರ ಹೆಸರು ಎಳೆದು ತಂದಿರುವುದಕ್ಕೆ ಶೋಷಿತ ವರ್ಗಗಳ ಒಕ್ಕೂಟ ಸಿಡಿದೆದಿದ್ದು, ಸ್ಟಿಂಗ್ ಆಪರೇಷನ್​ ಕುರಿತು ಸರಿಯಾಗಿ ತನಿಖೆ ನಡೆಯದಿದ್ದರೇ ಜಿಲ್ಲೆ ಜಿಲ್ಲೆಯಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ ಎಂದು ಎಚ್ಚರಿಕೆ ನೀಡಿದೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶೋಷಿತ ವರ್ಗಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ, ಸರ್ಕಾರದಲ್ಲಿನ ಮುಖ್ಯವಾದವರೇ ಸ್ಟಿಂಗ್ ಆಪರೇಷನ್‌ನಲ್ಲಿ ಭಾಗಿಯಾಗಿದ್ದಾರೆ. ತನಿಖೆ ಮಾಡಬೇಕೆಂದು ಸಿದ್ದರಾಮಯ್ಯನವರು ದೂರು ಕೊಟ್ಟಿದ್ದಾರೆ. ತನಿಖೆ ಹೇಗೆ ನಡೆಯುತ್ತೆ ಅಂತಾ ಒಂದು ವಾರ ಕಾದು ನೋಡುತ್ತೇವೆ. ಸಿದ್ದರಾಮಯ್ಯನವರ ಮರ್ಯಾದೆ ತೆಗೆದವರಿಗೆ ಪಾಠ ಕಲಿಸಬೇಕು. ಸ್ಟಿಂಗ್ ಆಪರೇಷನ್ ಹಿಂದೆ ಇರುವ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಒಂದು ವೇಳೆ ತನಿಖೆ ಆಗದೆ ಇದ್ರೆ ಜಿಲ್ಲೆ ಜಿಲ್ಲೆಯಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಜೆಡಿಎಸ್​​ನಿಂದಲೂ ಆಯುಕ್ತರಿಗೆ ದೂರು: ಮತ್ತಷ್ಟು ತೀವ್ರ ಸ್ವರೂಪ ಪಡೆದ ಸ್ಟಿಂಗ್ ಆಪರೇಷನ್ ಪ್ರಕರಣ

ಯಾಕೆ ಸುಮ್ಮನೇ ಕೂತಿದ್ದೀರಿ ಎಂದು ನಮ್ಮ ಮೇಲೆ ಒತ್ತಡ ಇದೆ. ಸಿದ್ದರಾಮಯ್ಯ ಪರ ನಿಲ್ಲಬೇಕು ಅನ್ನೋದು ಸಮಾಜದ ಧ್ವನಿ ಇದೆ. ಈ ಸರ್ಕಾರದಲ್ಲಿ ಮುಖ್ಯವಾಗಿರೋರೆ ಇದರ ಹಿಂದೆ ಇದ್ದಾರೆ. ಸರ್ಕಾರಕ್ಕೆ ತನಿಖೆ ಮಾಡಬೇಕು ಎನ್ನುವ ಯೋಚನೆ ಇಲ್ಲ ಅನಿಸುತ್ತೆ. ಕುಮಾರಸ್ವಾಮಿ ರೀತಿ ಯಾರು ಇದ್ದಾರೆ ಎಂದು ಹೆಸರು ಹೇಳಲ್ಲ. ಆದರೆ ನಾವು ಊಹೆ ಮಾಡಿಕೊಂಡಿದ್ದೇವೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More