AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಿಂಗ್​​ ಪ್ರಕರಣ ಸಂಬಂಧ ಕುಮಾರಸ್ವಾಮಿ ದೆಹಲಿ ಮನೆ ಮಹಜರು?: ಪ್ರಿಯಾಂಕ್​​ ಖರ್ಗೆ ಹೇಳಿದ್ದಿಷ್ಟು

ಸ್ಟಿಂಗ್​​ ಪ್ರಕರಣ ಸಂಬಂಧ ಕುಮಾರಸ್ವಾಮಿ ದೆಹಲಿ ಮನೆ ಮಹಜರು?: ಪ್ರಿಯಾಂಕ್​​ ಖರ್ಗೆ ಹೇಳಿದ್ದಿಷ್ಟು

ಅನಿಲ್​ ಕಲ್ಕೆರೆ
| Edited By: |

Updated on: Oct 30, 2026 | 2:54 PM

Share

ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನೆ ಮಹಜರು ಕುರಿತ ಮಾಧ್ಯಮ ಪ್ರಶ್ನೆಗೆ, ತನಿಖೆ ಪ್ರಗತಿಯಲ್ಲಿದ್ದು ಸೂಕ್ತ ಸಮಯದಲ್ಲಿ ಮಾಹಿತಿ ಬಹಿರಂಗಪಡಿಸುವುದಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ತನಿಖೆ ಗೌಪ್ಯವಾಗಿ ಇಡಬೇಕು ಎಂಬ ಕಾರಣಕ್ಕಾಗಿ ಯಾರ್ಯಾರ ಹೆಸರನ್ನು ಉಲ್ಲೇಖಿಸಬೇಕಾಗಿತ್ತು ಉಲ್ಲೇಖಿಸಿಲ್ಲ. ಸಮಯ ಬಂದಾಗ ಅದು ಹೊರಗೆ ಬರುತ್ತೆ ಎಂದವರು ಮಾರ್ಮಿಕವಾಗಿ ತಿಳಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್​​ 30: ಸ್ಟಿಂಗ್​​ ಆಪರೇಷನ್​​ ಪ್ರಕರಣ ಸಂಬಂಧ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಅವರ ಮನೆ ಮಹಜರು ನಡೆದಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ, ತನಿಖೆ ಪ್ರಗತಿಯಲ್ಲಿದೆ ಎಂದಷ್ಟೇ ಉತ್ತರಿಸಿದ್ದಾರೆ. ಯಾವಾಗ ತನಿಖೆಯ ಮಾಹಿತಿ ಅವಶ್ಯಕತೆ ಇದೆಯೋ ಆಗ ಕೊಡ್ತೇವೆ. ನಿನ್ನೆ ಕೆಲ ಮಾಹಿತಿಗಳನ್ನು ಒದಗಿಸಿದ್ದೇವೆ. ತನಿಖೆ ಗೌಪ್ಯವಾಗಿ ಇಡಬೇಕು ಎಂಬ ಕಾರಣಕ್ಕಾಗಿ ಯಾರ್ಯಾರ ಹೆಸರನ್ನು ಉಲ್ಲೇಖಿಸಬೇಕಾಗಿತ್ತು ಉಲ್ಲೇಖಿಸಿಲ್ಲ. ಸಮಯ ಬಂದಾಗ ಅದು ಹೊರಗೆ ಬರುತ್ತೆ ಎಂದವರು ಮಾರ್ಮಿಕವಾಗಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More