ಸ್ಟಿಂಗ್ ಪ್ರಕರಣ ಸಂಬಂಧ ಕುಮಾರಸ್ವಾಮಿ ದೆಹಲಿ ಮನೆ ಮಹಜರು?: ಪ್ರಿಯಾಂಕ್ ಖರ್ಗೆ ಹೇಳಿದ್ದಿಷ್ಟು
ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನೆ ಮಹಜರು ಕುರಿತ ಮಾಧ್ಯಮ ಪ್ರಶ್ನೆಗೆ, ತನಿಖೆ ಪ್ರಗತಿಯಲ್ಲಿದ್ದು ಸೂಕ್ತ ಸಮಯದಲ್ಲಿ ಮಾಹಿತಿ ಬಹಿರಂಗಪಡಿಸುವುದಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ತನಿಖೆ ಗೌಪ್ಯವಾಗಿ ಇಡಬೇಕು ಎಂಬ ಕಾರಣಕ್ಕಾಗಿ ಯಾರ್ಯಾರ ಹೆಸರನ್ನು ಉಲ್ಲೇಖಿಸಬೇಕಾಗಿತ್ತು ಉಲ್ಲೇಖಿಸಿಲ್ಲ. ಸಮಯ ಬಂದಾಗ ಅದು ಹೊರಗೆ ಬರುತ್ತೆ ಎಂದವರು ಮಾರ್ಮಿಕವಾಗಿ ತಿಳಿಸಿದ್ದಾರೆ.
ಬೆಂಗಳೂರು, ಅಕ್ಟೋಬರ್ 30: ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮನೆ ಮಹಜರು ನಡೆದಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ತನಿಖೆ ಪ್ರಗತಿಯಲ್ಲಿದೆ ಎಂದಷ್ಟೇ ಉತ್ತರಿಸಿದ್ದಾರೆ. ಯಾವಾಗ ತನಿಖೆಯ ಮಾಹಿತಿ ಅವಶ್ಯಕತೆ ಇದೆಯೋ ಆಗ ಕೊಡ್ತೇವೆ. ನಿನ್ನೆ ಕೆಲ ಮಾಹಿತಿಗಳನ್ನು ಒದಗಿಸಿದ್ದೇವೆ. ತನಿಖೆ ಗೌಪ್ಯವಾಗಿ ಇಡಬೇಕು ಎಂಬ ಕಾರಣಕ್ಕಾಗಿ ಯಾರ್ಯಾರ ಹೆಸರನ್ನು ಉಲ್ಲೇಖಿಸಬೇಕಾಗಿತ್ತು ಉಲ್ಲೇಖಿಸಿಲ್ಲ. ಸಮಯ ಬಂದಾಗ ಅದು ಹೊರಗೆ ಬರುತ್ತೆ ಎಂದವರು ಮಾರ್ಮಿಕವಾಗಿ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
