AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Feb 23, 2026 | 8:42 AM

Share

ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲು, ಚಪ್ಪಲಿ ತೂರಾಟ ಬಾಗಲಕೋಟೆಯಲ್ಲಿ ಉದ್ವಿಗ್ನ ಸ್ಥಿತಿಗೆ ಕಾರಣವಾಗಿದೆ. ಘಟನೆ ನಡೆದು ನಾಲ್ಕು ದಿನಗಳಾದರೂ ಇಂದಿಗೂ ಹಿಂದು ಕಾರ್ಯಕರ್ತರ ಕಿಚ್ಚು ಆರುತ್ತಿಲ್ಲ. ಇದೀಗ ಫೆಬ್ರುವರಿ 26 ರಂದು ಹಿಂದು ಹೋರಾಟಗಾರರು ಬೃಹತ್ ಹೋರಾಟಕ್ಕೆ ಕರೆ ನೀಡಿದ್ದಾರೆ.

ಬಾಗಲಕೋಟೆ, ಫೆಬ್ರವರಿ 23: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹಿಂದೂ ಸಮುದಾಯವು ಫೆಬ್ರವರಿ 26 ರಂದು ದೊಡ್ಡ ಮಟ್ಟದ ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ಇತ್ತೀಚೆಗೆ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ಮೇಲೆ ಕಲ್ಲು ಮತ್ತು ಚಪ್ಪಲಿ ಎಸೆದು ಅಪಮಾನ ಮಾಡಿದವರನ್ನು ಇನ್ನೂ ಬಂಧಿಸಿಲ್ಲ ಎಂದು ಭಾನುವಾರ ಸಭೆಯಲ್ಲಿ ಆತಂಕ ವ್ಯಕ್ತಪಡಿಸಲಾಯಿತು. ಹಿಂದೂ ಸಕಲ ಸಮಾಜದ ಮುಖಂಡರು ಮತ್ತು ರಾಜಕೀಯ ನಾಯಕರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಲಾಯಿತು. ಆರೋಪಿಗಳನ್ನು ಬಂಧಿಸದಿದ್ದರೆ, ಇದೇ ಫೆಬ್ರವರಿ 26 ರಂದು ಅಂಬಾಬಾಯಿ ದೇವಸ್ಥಾನದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಲಾಗಿದೆ.

ಅಂದು ರಾತ್ರಿ ಮಸೀದಿ ಒಳಗೆ ಸೇರಿಕೊಂಡು ದುಷ್ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಆದಷ್ಟು ಬೇಗ ಬಂಧಿಸಬೇಕೆಂದು ಸಭೆ ಸರ್ಕಾರವನ್ನು ಆಗ್ರಹಿಸಲಾಗಿದೆ. ಫೆಬ್ರವರಿ 26 ರಂದು ಬೆಳಗ್ಗೆ 10,30 ಗಂಟೆಗೆ ಅಂಬಾಬಾಯಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಡಲಿದೆ. ಈ ಹೋರಾಟದ ಮೂಲಕ ಆರೋಪಿಗಳ ಬಂಧನಕ್ಕೆ ಒತ್ತಾಯಿಸಲು ಹಿಂದೂ ಸಮುದಾಯ ಮುಂದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More