ಮೈಸೂರು: ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟದ ಭಯಾನಕ ವಿಡಿಯೋ ಇಲ್ಲಿದೆ

| Updated By: Ganapathi Sharma

Updated on: Feb 11, 2025 | 7:14 AM

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಉದ್ರಿಕ್ತರ ಗುಂಪು ಸೋಮವಾರ ಕಲ್ಲು ತೂರಾಟ ನಡೆಸಿದೆ. ಪೊಲೀಸ್ ವಾಹನಗಳ ಮೇಲೂ ಕಲ್ಲು ತೂರಲಾಗಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಸುಮಾರು ಹೊತ್ತು ಉದ್ವಿಗ್ನ ಪರಿಸ್ಥಿತಿ ಇತ್ತು. ನಂತರ ಪೊಲೀಸರು ಲಾಠಿಚಾರ್ಜ್, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ವಿಡಿಯೋ ಇಲ್ಲಿದೆ.

ಮೈಸೂರು, ಫೆಬ್ರವರಿ 11: ಸಾಮಾಜಿಕ ಮಾಧ್ಯಮ ಪೋಸ್ಟ್​​ ಹಚ್ಚಿದ ಕಿಚ್ಚಿನಿಂದಾಗಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಸೋಮವಾರ ರಾತ್ರಿ ಸಮುದಾಯವೊಂದರ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದೆ. ಪೊಲೀಸ್ ವಾಹನದ ಮೇಲೂ ಕಲ್ಲು ತೂರಾಟ ನಡೆದಿದೆ. ನಂತರ ಲಾಠಿಚಾರ್ಜ್ ಮಾಡಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಯಿತು. ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟದ ವಿಡಿಯೋ ಇಲ್ಲಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಕಿಡಿ ಹೊತ್ತಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ, ಅಶ್ರುವಾಯು ಪ್ರಯೋಗ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ