ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಶಿಕ್ಷಕಿಯ ಸಮಯ ಪ್ರಜ್ಞೆಯಿಂದ ಮಕ್ಕಳು ಬಚಾವ್
ಹುಣಸೂರು ತಾಲೂಕಿನ ದಾಸನಪುರದಲ್ಲಿ ಶಾಲಾ ಶಿಕ್ಷಕಿಯ ಸಮಯ ಪ್ರಜ್ಞೆಯಿಂದ ಸಂಭವನೀಯ ಭಾರಿ ಅನಾಹುತವೊಂದು ತಪ್ಪಿದೆ. ಮಕ್ಕಳಿರುವ ಹೊತ್ತಲ್ಲೇ ಗಾಳಿ ಮಳೆಗೆ ಶಾಲೆಯ ಮೇಲ್ಛಾವಣಿ ಹಾರಿಹೋಗಿದ್ದು, ಶಿಕ್ಷಕಿ ವಿದ್ಯಾರ್ಥಿಗಳನ್ನು ಡೆಸ್ಕ್ ಕೆಳಗೆ ಕೂರಿಸಿದ ಕಾರಣ ಎಲ್ಲರೂ ಬಚಾವ್ ಆಗಿದ್ದಾರೆ. ಹೀಗಿದ್ದರೂ ಒಂದೊಮ್ಮೆ ಮೇಲ್ಛಾವಣಿ ಕುಸಿದಿದ್ದರೆ ದೊಡ್ಡ ಅನಾಹುತವೇ ನಡೆಯುವ ಸಾಧ್ಯತೆ ಇತ್ತು ಎನ್ನಲಾಗಿದೆ.
ಮೈಸೂರು, ಮಾರ್ಚ್ 18: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರ್ಷದ ಮೊದಲ ಮಳೆ ಸುರಿದಿದೆ. ಸುಮಾರು 1 ಗಂಟೆಗೂ ಹೆಚ್ಚು ಸಮಯ ವರುಣ ಅಬ್ಬರಿಸಿದ್ದು, ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಮಂದಿಗೆ ತಂಪಿನ ಅನುಭವವಾಗಿದೆ. ಈ ನಡುವೆ ಭಾರೀ ಗಾಳಿ ಮಳೆ ವೇಳೆ ಹುಣಸೂರು ತಾಲೂಕಿನ ದಾಸನಪುರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ಮಕ್ಕಳು ತರಗತಿಯಲ್ಲಿದ್ದ ಹೊತ್ತಲ್ಲೇ ಗಾಳಿ ಮಳೆಗೆ ಶಾಲೆಯ ಮೇಲ್ಚಾವಣಿ ಹಾರಿ ಹೋಗಿದ್ದು, ಈ ವೇಳೆ ಸಮಯಪ್ರಜ್ಞೆ ಮೆರೆದ ಶಿಕ್ಷಕಿ ಸುಮಾ ಎಲ್ಲ ವಿದ್ಯಾರ್ಥಿಗಳನ್ನು ಡೆಸ್ಕ್ ಕೆಳಗೆ ಕೂರಿಸಿದ್ದಾರೆ. ಹೀಗಾಗಿ ಸಂಭವನೀಯ ಅನಾಹುತ ತಪ್ಪಿದೆ. ಗಾಳಿಗೆ ಮೇಲ್ಛಾವಣಿ ಹಾರಿ ಹೋಗುವ ಬದಲು ಕುಸಿದಿದ್ದರೆ ದೊಡ್ಡ ಅನಾಹುತವೇ ನಡೆಯುವ ಸಾಧ್ಯತೆ ಇತ್ತು ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್ಡ್ರೈವ್ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

