AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ 3 ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ: ಕುಟುಂಬಸ್ಥರಿಗೆ ಆಘಾತ ತಂದ ಘಟನೆ

ವಿಜಯಪುರದಲ್ಲಿ 3 ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ: ಕುಟುಂಬಸ್ಥರಿಗೆ ಆಘಾತ ತಂದ ಘಟನೆ

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: May 06, 2026 | 11:22 AM

Share

ವಿಜಯಪುರದ ರಾಜಕುಮಾರ ಲೇಔಟ್‌ನಲ್ಲಿ ಬೀದಿ ನಾಯಿಯೊಂದು ಮೂರು ವರ್ಷದ ವಿರಾಜ್ ಸಂತೋಷ್ ಬಿರಾದಾರ್‌ನನ್ನು ಕಚ್ಚಿ 100 ಅಡಿ ದೂರ ಎಳೆದೊಯ್ದಿದೆ. ಈ ಭಯಾನಕ ಘಟನೆಯಿಂದ ಬಾಲಕನಿಗೆ ಬೆನ್ನಿನ ಮೇಲೆ ಗಂಭೀರ ಗಾಯಗಳಾಗಿವೆ. ಕುಟುಂಬಸ್ಥರು ತೀವ್ರ ಆಘಾತಕ್ಕೊಳಗಾಗಿದ್ದು, ಬೀದಿ ನಾಯಿಗಳ ನಿಯಂತ್ರಣ ಮತ್ತು ಮಕ್ಕಳ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ. ಘಟನೆ ಬಗ್ಗೆ ಪಾಲಿಕೆ ಕ್ರಮಕ್ಕೆ ಆಗ್ರಹಿಸಲಾಗಿದೆ.

ವಿಜಯಪುರ, ಮೇ 06: ರಾಜಕುಮಾರ ಲೇಔಟ್‌ನಲ್ಲಿ ಭೀಕರ ಘಟನೆಯೊಂದು ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ವಿರಾಜ್ ಸಂತೋಷ್ ಬಿರಾದಾರ್ ಎಂಬ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ನಾಯಿಯೊಂದು ಬಾಲಕನನ್ನು ಕಚ್ಚಿ ಸುಮಾರು 100 ಅಡಿ ದೂರ ಎಳೆದೊಯ್ದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೆರೆಹೊರೆಯವರ ಸಕಾಲಿಕ ಮಧ್ಯಪ್ರವೇಶದಿಂದ ಬಾಲಕನ ಜೀವ ಉಳಿದಿದೆ. ಬಾಲಕನ ಬೆನ್ನು ಮತ್ತು ತೊಡೆಯ ಭಾಗಕ್ಕೆ ಗಾಯಗಳಾಗಿದ್ದು, ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದರೂ, ಗಂಭೀರ ಗಾಯಗೊಂಡಿರೋದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ವಿರಾಜ್ ದೊಡ್ಡಪ್ಪ ರಾಜಶೇಖರ್ ಅವರ ಪ್ರಕಾರ, ಘಟನೆ ನಡೆದ ತಕ್ಷಣವೇ ಮಹಾನಗರ ಪಾಲಿಕೆಗೆ ಮಾಹಿತಿ ನೀಡಲಾಗಿದೆ,. ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More