ವಿಜಯಪುರದಲ್ಲಿ 3 ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ: ಕುಟುಂಬಸ್ಥರಿಗೆ ಆಘಾತ ತಂದ ಘಟನೆ
ವಿಜಯಪುರದ ರಾಜಕುಮಾರ ಲೇಔಟ್‌ನಲ್ಲಿ ಬೀದಿ ನಾಯಿಯೊಂದು ಮೂರು ವರ್ಷದ ವಿರಾಜ್ ಸಂತೋಷ್ ಬಿರಾದಾರ್‌ನನ್ನು ಕಚ್ಚಿ 100 ಅಡಿ ದೂರ ಎಳೆದೊಯ್ದಿದೆ. ಈ ಭಯಾನಕ ಘಟನೆಯಿಂದ ಬಾಲಕನಿಗೆ ಬೆನ್ನಿನ ಮೇಲೆ ಗಂಭೀರ ಗಾಯಗಳಾಗಿವೆ. ಕುಟುಂಬಸ್ಥರು ತೀವ್ರ ಆಘಾತಕ್ಕೊಳಗಾಗಿದ್ದು, ಬೀದಿ ನಾಯಿಗಳ ನಿಯಂತ್ರಣ ಮತ್ತು ಮಕ್ಕಳ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ. ಘಟನೆ ಬಗ್ಗೆ ಪಾಲಿಕೆ ಕ್ರಮಕ್ಕೆ ಆಗ್ರಹಿಸಲಾಗಿದೆ.
ವಿಜಯಪುರ, ಮೇ 06: ರಾಜಕುಮಾರ ಲೇಔಟ್‌ನಲ್ಲಿ ಭೀಕರ ಘಟನೆಯೊಂದು ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ವಿರಾಜ್ ಸಂತೋಷ್ ಬಿರಾದಾರ್ ಎಂಬ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ನಾಯಿಯೊಂದು ಬಾಲಕನನ್ನು ಕಚ್ಚಿ ಸುಮಾರು 100 ಅಡಿ ದೂರ ಎಳೆದೊಯ್ದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೆರೆಹೊರೆಯವರ ಸಕಾಲಿಕ ಮಧ್ಯಪ್ರವೇಶದಿಂದ ಬಾಲಕನ ಜೀವ ಉಳಿದಿದೆ. ಬಾಲಕನ ಬೆನ್ನು ಮತ್ತು ತೊಡೆಯ ಭಾಗಕ್ಕೆ ಗಾಯಗಳಾಗಿದ್ದು, ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದರೂ, ಗಂಭೀರ ಗಾಯಗೊಂಡಿರೋದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ವಿರಾಜ್ ದೊಡ್ಡಪ್ಪ ರಾಜಶೇಖರ್ ಅವರ ಪ್ರಕಾರ, ಘಟನೆ ನಡೆದ ತಕ್ಷಣವೇ ಮಹಾನಗರ ಪಾಲಿಕೆಗೆ ಮಾಹಿತಿ ನೀಡಲಾಗಿದೆ,. ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
