ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ವಿಡಿಯೋ ವೈರಲ್
ಚಿಕ್ಕ ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ ದಿನೇ ದಿನೇ ಹೆಚ್ಚುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಮನೆಯಿಂದ ಹೊರಗೆ ಬಿಡಲು ಹೆದರುತ್ತಿದ್ದಾರೆ. ಇತ್ತೀಚೆಗೆ ಸಂಗಾರೆಡ್ಡಿ ಜಿಲ್ಲೆಯಲ್ಲಿ ಸುಮಾರು 15 ನಾಯಿಗಳು 3 ವರ್ಷದ ಬಾಲಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿವೆ. ಈ ದಾಳಿಯ ದೃಶ್ಯಗಳು ಅಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ದಾಖಲಾಗಿವೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಸ್ಥಳೀಯರು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು.
ಸಂಗಾರೆಡ್ಡಿ, ಜನವರಿ 8: ಚಿಕ್ಕ ಮಕ್ಕಳ ಮೇಲೆ ಬೀದಿ ನಾಯಿಗಳ (Stray Dogs) ದಾಳಿ ದಿನೇ ದಿನೇ ಹೆಚ್ಚುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಮನೆಯಿಂದ ಹೊರಗೆ ಬಿಡಲು ಹೆದರುತ್ತಿದ್ದಾರೆ. ಇತ್ತೀಚೆಗೆ ಸಂಗಾರೆಡ್ಡಿ ಜಿಲ್ಲೆಯಲ್ಲಿ ಸುಮಾರು 15 ನಾಯಿಗಳು 3 ವರ್ಷದ ಬಾಲಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿವೆ. ಈ ದಾಳಿಯ ದೃಶ್ಯಗಳು ಅಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ದಾಖಲಾಗಿವೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಸ್ಥಳೀಯರು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು. ಬೀದಿ ನಾಯಿಗಳ ದಾಳಿಯಿಂದ ಮೂರು ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಾಲಕನ ಕಿರುಚಾಟ ಕೇಳಿ ಅಲ್ಲಿದ್ದ ಮಹಿಳೆಯರು ಓಡಿ ಬಂದರು. ಅವರು ನಾಯಿಗಳ ಮೇಲೆ ಕಲ್ಲು ತೂರಿ ಬಾಲಕನನ್ನು ರಕ್ಷಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

