ಸೈಕಲ್ ಮೇಲೆ ಹೋಗುತ್ತಿದ್ದ ವಿದ್ಯಾರ್ಥಿ ಮೇಲೆ ಬೀದಿ ನಾಯಿ ದಾಳಿ
ಉತ್ತರ ಪ್ರದೇಶದ ಸೀತಾಪುರದಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯ ಮೇಲೆ ಬೀದಿನಾಯಿ ದಾಳಿ ಮಾಡಿ, ಕಾಲಿಗೆ ಕಚ್ಚಿದ ಘಟನೆ ನಡೆದಿದೆ. ಅಮಿತ್ ಮಂಗ್ವಾಕರ್ ಎಂಬ ವಿದ್ಯಾರ್ಥಿ ಮಧ್ಯಾಹ್ನ ಶಾಲೆ ಮುಗಿಸಿ ಸೈಕಲ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದ. ಮೋತಿಪುರದ ಬಳಿ ಬೀದಿ ನಾಯಿ ಇದ್ದಕ್ಕಿದ್ದಂತೆ ಅವನ ಮೇಲೆ ಎರಗಿತು. ಈ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನವದೆಹಲಿ, ಆಗಸ್ಟ್ 26: ಶಾಲೆಯಿಂದ ತನ್ನ ಸೈಕಲ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವಿದ್ಯಾರ್ಥಿಯ ಮೇಲೆ ಬೀದಿ ನಾಯಿ ದಾಳಿ ಮಾಡಿ ಕಚ್ಚುತ್ತಿರುವ ವಿಡಿಯೋ (Viral Video) ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಸೀತಾಪುರದ ಮಹ್ಮದಾಬಾದ್‌ನ ಕೊಟ್ವಾಲಿ ಪ್ರದೇಶದ ಮೋತಿಪುರ ಬಳಿ ಇಂದು ಮಧ್ಯಾಹ್ನ ರಸ್ತೆಯ ಮಧ್ಯದಲ್ಲಿ ಬೀದಿ ನಾಯಿಯೊಂದು ಸೈಕಲ್‌ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯ ಮೇಲೆ ಇದ್ದಕ್ಕಿದ್ದಂತೆ ದಾಳಿ ಮಾಡಿದೆ. ಈ ದಾಳಿಯಲ್ಲಿ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೇಶಾದ್ಯಂತ ಬೀದಿ ನಾಯಿಗಳ ದಾಳಿ ಹೆಚ್ಚಾಗುತ್ತಿರುವ ಬೆನ್ನಲ್ಲೇ ಈ ಘಟನೆ ನಡೆದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

