ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಬೀದಿ ನಾಯಿಗಳ ಕಾಟ: ಮಕ್ಕಳು, ವೃದ್ಧರ ಮೇಲೆ ಮನಸೋ ಇಚ್ಛೆ ದಾಳಿ

Edited By:

Updated on: Mar 04, 2026 | 11:54 AM

ಬೆಂಗಳೂರಿನ ಅಹದ್ ಸೆರೆನಿಟಿ ಅಪಾರ್ಟ್​ಮೆಂಟ್ ನಿವಾಸಿಗಳು ಬೀದಿ ನಾಯಿಗಳ ದಾಳಿಯಿಂದ ಭಯಭೀತರಾಗಿದ್ದಾರೆ. ಮಕ್ಕಳು ಮತ್ತು ವಯಸ್ಕರ ಮೇಲೆ ನಾಯಿಗಳು ಪದೇ ಪದೇ ಹಲ್ಲೆ ನಡೆಸುತ್ತಿವೆ. 24 ದಿನಗಳ ಹಿಂದೆ ಮಗಳ ಕೈ ಮುರಿದ ಘಟನೆಯ ಬಳಿಕ, ನಿವಾಸಿಗಳು ನಾಯಿಗಳ ಹಾವಳಿ ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು, ಮಾರ್ಚ್​​ 04: ಅಹದ್ ಸೆರೆನಿಟಿ ಅಪಾರ್ಟ್​ಮೆಂಟ್ ನಿವಾಸಿಗಳು ಬೀದಿ ನಾಯಿಗಳ ಹಾವಳಿಯಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ನಿವಾಸಿಗಳು ನಾಯಿಗಳ ಕಾಟದಿಂದ ಮುಕ್ತಿ ಕೋರಿ ಪ್ರತಿಭಟನೆ ನಡೆಸಿದ್ದಾರೆ. ಮಕ್ಕಳು ಮತ್ತು ವಯಸ್ಕರ ಮೇಲೆ ಬೀದಿ ನಾಯಿಗಳು ಗುಂಪು ಗುಂಪಾಗಿ ಬಂದು ದಾಳಿ ಮಾಡುತ್ತಿರುವುದು ದೈನಂದಿನ ಸಮಸ್ಯೆಯಾಗಿದೆ ಎಂದು ದೂರಿದ್ದಾರೆ. ತಮ್ಮ ಮಗಳ ಮೇಲೆ 24 ದಿನಗಳ ಹಿಂದೆ ನಾಯಿಗಳು ದಾಳಿ ಮಾಡಿ ಕೈ ಮುರಿದ ಘಟನೆಯನ್ನು ಇದೇ ವೇಳೆ ನಿವಾಸಿ ಒಬ್ಬರು ಹಂಚಿಕೊಂಡಿದ್ದಾರೆ. ಇದರಿಂದ ಆಕೆ ಶಾಲೆಗೂ ಹೋಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎಂದರೆ, ಅಪಾರ್ಟ್​ಮೆಂಟ್ ನಿವಾಸಿಗಳು ತಮ್ಮ ರಕ್ಷಣೆಗಾಗಿ ಲಾಠಿ ಹಿಡಿದುಕೊಂಡು ಓಡಾಡುವಂತಾಗಿದೆ. ಈ ಬಗ್ಗೆ ದೂರು ನೀಡಿದ್ದರೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಲೇ ಇದೆ ಎಂದು ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಈ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us