ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು, ತಪ್ಪಿದ ಭಾರೀ ಅನಾಹುತ

Edited By:

Updated on: Feb 03, 2026 | 10:23 AM

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್​ವೇಗೆ ಬೀದಿನಾಯಿಗಳು ನುಗ್ಗಿ ಕೆಲಕಾಲ ಆತಂಕದ ಸನ್ನಿವೇಶ ಸೃಷ್ಟಿಯಾದ ಘಟನೆ ವರದಿಯಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಭದ್ರತೆಯನ್ನು ಮತ್ತಷ್ಟು ಕಠಿಣಗೊಳಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಸದ್ಯ, ಬೀದಿನಾಯಿ ರನ್​ವೇ ಪ್ರವೇಶಿಸಿದ ವಿಡಿಯೋ ವೈರಲ್ ಆಗುತ್ತಿದೆ.

ದೇವನಹಳ್ಳಿ, ಫೆಬ್ರವರಿ 3: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಭದ್ರತಾ ಲೋಪವೊಂದು ಬೆಳಕಿಗೆ ಬಂದಿದೆ. ರನ್‌ವೇ ಪ್ರದೇಶಕ್ಕೆ ಎರಡು ಬೀದಿ ನಾಯಿಗಳು ನುಗ್ಗಿದ್ದು, ಕೆಲಕಾಲ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಮಾನಗಳ ಹಾರಾಟದ ಸಮಯದಲ್ಲೇ ಎರಡು ಬೀದಿ ನಾಯಿಗಳು ರನ್‌ವೇಗೆ ಪ್ರವೇಶಿಸಿದ್ದು, ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಹರಸಾಹಸಪಟ್ಟು ಬೀದಿನಾಯಿಗಳನ್ನು ಸೆರೆಹಿಡಿದರು. ಅದೃಷ್ಟವಶಾತ್ ಆ ಸಮಯದಲ್ಲಿ ರನ್‌ವೇ ಮೇಲೆ ಯಾವುದೇ ವಿಮಾನಗಳು ಇರದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ.

ಟರ್ಮಿನಲ್–2ಕ್ಕೆ ಸಂಬಂಧಿಸಿದ ಹೊಸ ರನ್‌ವೇ ಪ್ರದೇಶಕ್ಕೆ ನುಗ್ಗಿದ ಬೀದಿ ನಾಯಿಗಳು, ಅಲ್ಲಿದ್ದ ವಿಮಾನಗಳ ಸಮೀಪದಲ್ಲೇ ಓಡಾಡುತ್ತಿರುವ ದೃಶ್ಯಗಳು ಕಂಡುಬಂದಿವೆ. ಇದರಿಂದ ಕೆಲ ಸಮಯ ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More