ದಾವಣಗೆರೆಯಲ್ಲಿ ಒಂದೇ ದಿನ 20ಕ್ಕೂ ಹೆಚ್ಚು ಜನರಿಗೆ ನಾಯಿ ಕಡಿತ

Updated By: ವಿವೇಕ ಬಿರಾದಾರ

Updated on: Aug 04, 2025 | 9:00 PM

ದಾವಣಗೆರೆಯ ಹಳೇಕುಂದುವಾಡ ಪ್ರದೇಶದಲ್ಲಿ ಒಂದೇ ದಿನ 20ಕ್ಕೂ ಹೆಚ್ಚು ಜನರಿಗೆ ಬೀದಿ ನಾಯಿಗಳು ಕಚ್ಚಿವೆ. ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಐವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವುದರಿಂದ ಸಾರ್ವಜನಿಕರು ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಮತ್ತು ತಕ್ಷಣದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ದಾವಣಗೆರೆ, ಆಗಸ್ಟ್​ 04: ಹಳೇಕುಂದುವಾಡ ಪ್ರದೇಶದಲ್ಲಿ ಒಂದೇ ದಿನ 20ಕ್ಕೂ ಹೆಚ್ಚು ಜನರಿಗೆ ಬೀದಿನಾಯಿಗಳು ಕಚ್ಚಿವೆ. ನಾಯಿ ಕಡಿದು ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಐವರ ಸ್ಥಿತಿ ಚಿಂತಾಜನಕವಾಗಿದೆ. ಭಾವನ(11) ಆಶಾ (8),ಕರಿಬಸಮ್ಮ(45) ಅನಿಲ್‌ ಕುಮಾರ್ (36), ನಾಯಿಕಡಿತಕ್ಕೆ ಒಳಗಾದವರು. ನಾಯಿ ಕಡಿತಕ್ಕೊಳಗಾದವರನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಮಾಹಿತಿ ನೀಡಿದರೂ ಕ್ರಮಕೈಗೊಳ್ಳದ ಪಾಲಿಕ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.