ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್

|

Updated on: Sep 26, 2024 | 8:41 PM

ತೆಲಂಗಾಣದ ಕರೀಂನಗರದಲ್ಲಿ ಬೀದಿ ನಾಯಿಗಳು ಮಹಿಳೆ ಮತ್ತು ಆಕೆಯ ಮಗುವಿನ ಮೇಲೆ ದಾಳಿ ಮಾಡಿದ ವಿಡಿಯೋ ವೈರಲ್ ಆಗಿದೆ. ನಾಯಿಗಳು ದಾಳಿ ಮಾಡುತ್ತಿದ್ದಂತೆ ಆ ಮಹಿಳೆ ತನ್ನ ಮಗುವನ್ನು ಎತ್ತಿಕೊಂಡು ಓಡಲು ಪ್ರಯತ್ನಿಸಿದಳು. ಆದರೆ ಓಡಿಹೋಗಲು ಪ್ರಯತ್ನಿಸುವಾಗ ಬಿದ್ದಳು. ಈ ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣ ರಕ್ಷಣೆಗೆ ಧಾವಿಸಿ ನಾಯಿಗಳನ್ನು ಓಡಿಸಿದರು.

ಹೈದರಾಬಾದ್: ತೆಲಂಗಾಣದ ಕರೀಂನಗರ ಜಿಲ್ಲೆಯ ಕಾಶ್ಮೀರ ಗಡ್ಡಾ ಪ್ರದೇಶದಲ್ಲಿ ಮಹಿಳೆ ಮತ್ತು ಆಕೆಯ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಈ ಆಘಾತಕಾರಿ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೀದಿ ನಾಯಿಗಳು ಬೊಗಳಲು ಪ್ರಾರಂಭಿಸಿದಾಗ ಮಹಿಳೆ ಮಗುವಿನೊಂದಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ