AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕ್ರಮ: 10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ

ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕ್ರಮ: 10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jul 25, 2026 | 5:50 PM

Share

ಮುಖ್ಯಾಂಶಗಳು

  • ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಕೇಂದ್ರ ಕಠಿಣ ನಿರ್ಧಾರ ತೆಗೆದುಕೊಂಡಿದೆ
  • ಆರೋಪಿಗಳಿಗೆ 10 ವರ್ಷ ಶಿಕ್ಷೆ, ₹ 10 ಕೋಟಿ ರೂ ದಂಡ
  • ನೀಟ್ ವಿಚಾರದಲ್ಲಿ ಕೇಂದ್ರ ಸರ್ಕಾರ ಬಹಳ ಗಂಭೀರವಾಗಿದೆ

ಪರೀಕ್ಷಾ ಅಕ್ರಮ ತಡೆಗೆ ಸರ್ಕಾರವು "ಪಬ್ಲಿಕ್ ಎಕ್ಸಾಮಿನೇಷನ್ ಪ್ರಿವೆನ್ಷನ್ ಆಫ್ ಆಕ್ಟ್, 2024" ಜಾರಿಗೆ ತಂದಿದೆ. ಇದರಡಿ ಶಿಕ್ಷೆಯನ್ನು ಐದರಿಂದ ಹತ್ತು ವರ್ಷಕ್ಕೆ ಮತ್ತು ದಂಡವನ್ನು 10 ಕೋಟಿ ರೂಪಾಯಿಗೆ ಹೆಚ್ಚಿಸಲಾಗಿದೆ. ನೀಟ್ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿ, ಜಾಮೀನುರಹಿತ ಅಪರಾಧವನ್ನಾಗಿ ಮಾಡಲಾಗಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ. 22 ಲಕ್ಷ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸುವ ಮೂಲಕ ಸರ್ಕಾರ ತನ್ನ ಗಂಭೀರತೆಯನ್ನು ಪ್ರದರ್ಶಿಸಿದೆ.

ಧಾರವಾಡ, ಜುಲೈ 25: ‘‘ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ವಿಷಯವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದು, “ಪಬ್ಲಿಕ್ ಎಕ್ಸಾಮಿನೇಷನ್ ಪ್ರಿವೆನ್ಷನ್ ಆಫ್ ಆಕ್ಟ್, 2024” ಅನ್ನು ಜಾರಿಗೆ ತಂದಿದೆ’’ ಎಂದು ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಈ ಕಾಯ್ದೆಯಡಿ, ಅಕ್ರಮ ಎಸಗುವವರಿಗೆ ನೀಡಲಾಗುತ್ತಿದ್ದ ಶಿಕ್ಷೆಯನ್ನು ಐದು ವರ್ಷಗಳಿಂದ ಹತ್ತು ವರ್ಷಕ್ಕೆ ಹೆಚ್ಚಿಸಲಾಗಿದೆ ಮತ್ತು 10 ಕೋಟಿ ರೂ ದಂಡವನ್ನು ವಿಧಿಸಲಾಗುತ್ತದೆ. ಹಿಂದೆ ಇಂಥ ಘಟನೆ ಆದಾಗ ಗಂಭೀರ ಕ್ರಮ ಕೈಗೊಂಡಿರಲಿಲ್ಲ. ಹಿಂದೆ 58 ಬಾರಿ UPSC ಪರೀಕ್ಷೆಯ ಪತ್ರಿಕೆ ಲೀಕ್ ಆಗಿದ್ದವು. ಅವುಗಳ ಬಗ್ಗೆ ನಾವು ಮಾತನಾಡುವುದಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದಾರೋ ಅವರನ್ನ ಬಂಧಿಸಲಾಗಿದೆ. ಅವರ ಮೇಲೆ ಜಾಮೀನುರಹಿತ ಕೇಸ್ ದಾಖಲಾಗಿದೆ. 22 ಲಕ್ಷ ವಿದ್ಯಾರ್ಥಿಗಳಿಗೆ ಮರು ನೀಟ್ ಪರೀಕ್ಷೆ ಮಾಡಲಾಗಿದೆ. ನೀಟ್ ವಿಚಾರದಲ್ಲಿ ಕೇಂದ್ರ ಸರ್ಕಾರ ಬಹಳ ಗಂಭೀರವಾಗಿದೆ’’ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More