ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಗ್​​ ಶಾಕ್​​: ಸಾರಿಗೆ ಇಲಾಖೆಯಿಂದ ಹೊಸ ನಿಯಮ

Updated on: Jan 27, 2026 | 2:24 PM

ರಸ್ತೆ ಸುರಕ್ಷತೆ ಹೆಚ್ಚಿಸಲು ಮತ್ತು ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸುವವರನ್ನು ನಿಯಂತ್ರಿಸಲು ಕರ್ನಾಟಕ ಸಾರಿಗೆ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ಒಂದು ವರ್ಷದೊಳಗೆ ಐದು ಬಾರಿ ಸಂಚಾರ ನಿಯಮ ಉಲ್ಲಂಘಿಸಿದರೆ ಚಾಲನಾ ಪರವಾನಿಗೆ ರದ್ದಾಗಲಿದೆ. ಮೋಟಾರು ವಾಹನ ಕಾಯ್ದೆಯ ತಿದ್ದುಪಡಿ ಅನ್ವಯ ಈ ನಿಯಮ ಜನವರಿ 1ರಿಂದಲೇ ಜಾರಿಗೆ ಬಂದಿದೆ.

ಬೆಂಗಳೂರು, ಜನವರಿ 27: ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಪುನರಾವರ್ತಿತ ಸಂಚಾರ ನಿಯಮ ಉಲ್ಲಂಘನೆಗಳನ್ನು ತಡೆಯಲು ಸಾರಿಗೆ ಇಲಾಖೆಯ ಹೊಸ ಕಟ್ಟುನಿಟ್ಟಿನ ಕ್ರಮವನ್ನು ಜಾರಿಗೆ ತಂದಿದೆ. ಹೊಸ ಮಾರ್ಗಸೂಚಿಯ ಪ್ರಕಾರ, ವಾಹನ ಸವಾರರು ಒಂದು ವರ್ಷದ ಅವಧಿಯಲ್ಲಿ ಐದು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಅವರ ಚಾಲನಾ ಪರವಾನಿಗೆ ರದ್ದಾಗಲಿದೆ. ಮೋಟಾರು ವಾಹನ ಕಾಯ್ದೆಗೆ ಕೇಂದ್ರ ತಂದ ತಿದ್ದುಪಡಿಯ ಅನ್ವಯ ಹೊಸ ನಿಯಮ ಈ ವರ್ಷದ ಜನವರಿ 1ರಿಂದ ಜಾರಿಗೆ ಬಂದಿದೆ. ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ (ಆರ್‌ಟಿಒ) ಪರವಾನಿಗೆಯನ್ನು ರದ್ದುಗೊಳಿಸುವ ಅಧಿಕಾರವನ್ನು ನೀಡಲಾಗಿದೆ. ಅತಿಯಾದ ವೇಗ, ಕುಡಿದು ಚಾಲನೆ, ಮೊಬೈಲ್ ಬಳಕೆ, ಸಿಗ್ನಲ್ ಜಂಪ್, ಹೆಲ್ಮೆಟ್ ಅಥವಾ ಸೀಟ್‌ಬೆಲ್ಟ್ ಧರಿಸದಿರುವುದು ಸೇರಿದಂತೆ ಒಟ್ಟು 24 ಅಪರಾಧಗಳಿಗೆ ಈ ನಿಯಮ ಅನ್ವಯವಾಗಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.