ಪ್ರತಿಭಟನೆನಿರತ ಪಂಚಮಸಾಲಿಗಳ ಮೇಲೆ ಹಲ್ಲೆ ಖಂಡನೀಯ, ಅದರೆ ಕೆಲ ಪೊಲೀಸರೂ ಗಾಯಗೊಂಡಿದ್ದಾರೆ: ವಚನಾನಂದ ಸ್ವಾಮೀಜಿ
ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟಕ್ಕೆ ದಶಕಗಳ ಇತಿಹಾಸವಿದೆ, ಅದರೆ ಕೆಲ ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಹೋರಾಟಕ್ಕೆ ಕೈಜೋಡಿಸುವ ಪ್ರಯತ್ನ ಮಾಡಿದ್ದಾರೆ, ಅಂಥ ಗುಂಪಿನ ಜೊತೆ ಕಾಣಿಸಿಕೊಳ್ಳುವುದು ತನಗಿಷ್ಟವಿಲ್ಲ, ತಾವು ಬೇರೆ ರೀತಿಯಲ್ಲಿ ಹೋರಾಟ ಮಾಡುತ್ತಿರುವುದಾಗಿ ವಚನಾನಂದ ಸ್ವಾಮೀಜಿ ಹೇಳಿದರು.
ದಾವಣಗೆರೆ: ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿಗಳ ಮೇಲೆ ಪೊಲೀಸರಿಂದ ನಡೆದಿರುವ ಹಲ್ಲೆ ಖಂಡನೀಯ ಎಂದು ಶ್ವಾಸಗುರು ವಚನಾನಂದ ಸ್ವಾಮೀಜಿ ಹೇಳಿದರು. ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಹಿಂಸಾಕೃತ್ಯಗಳಲ್ಲಿ ಪೊಲೀಸರೂ ಗಾಯಗೊಂಡಿದ್ದಾರೆ, ಕೆಲಕಾಣದ ಕೈಗಳು ಮತ್ತು ಸಮಾಜಕ್ಕೆ ಕೆಟ್ಟ ಹೆಸರು ತರಬೇಕೆಂದಿರುವ ಕಿಡಿಗೇಡಿಗಳು ನಡೆಸಿರುವ ಕೃತ್ಯವಿದು, ಸರ್ಕಾರ ತನಿಖೆ ನಡೆಸಿ ತಪ್ಪಿತಸ್ಥರನ್ನು ಸೂಕ್ತ ಶಿಕ್ಷೆಗೊಳಪಡಿಸಬೇಕು, ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸಬೇಕು, ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಸ್ಸು ಪಡೆಯಬೇಕು ಮತ್ತು ಇಂಥ ಕೃತ್ಯಗಳು ಮರುಕಳಿಸದಂತೆ ಜಾಗ್ರತೆ ವಹಿಸಬೇಕೆಂದು ಸ್ವಾಮೀಜಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಹಿಂದಿನ ಪಂಚಮಸಾಲಿ ಹೋರಾಟಗಳು ಶಾಂತಿಯುತವಾಗಿದ್ದವು, ಈಗ ದಾರಿತಪ್ಪಿಸುವ ಕೆಲಸ ನಡೆದಿದೆ: ಕಾಶಪ್ಪನವರ್
Latest Videos