Video: ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ಪಿಯುಸಿ ವಿದ್ಯಾರ್ಥಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ
ಉತ್ತರ ಪ್ರದೇಶದ ಮೈನ್ಪುರಿಯಲ್ಲಿ 12ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ತುಟಿಗೆ ಕಚ್ಚಿ ತುಂಡರಿಸಿದ್ದಾನೆ. ಈ ಭೀಕರ ಘಟನೆಯಲ್ಲಿ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಾವಳಿಗಳು ವೈರಲ್ ಆಗಿವೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ಪರಾರಿಯಾಗಿರುವ ವಿದ್ಯಾರ್ಥಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆತನ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.
12ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಿಕ್ಷಕಿ ತನ್ನ ಪ್ರೀತಿ ಪ್ರೀತಿಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲೇ ಶಿಕ್ಷಕಿಯ ತುಟಿಗೆ ಕಚ್ಚಿ ತುಂಡರಿಸಿದ ಭೀಕರ ಘಟನೆ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಶಿಕ್ಷಕಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಶಿಕ್ಷಕಿಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಫತೇ ಬಹದ್ದೂರ್ ಸಿಂಗ್ ತಿಳಿಸಿದ್ದಾರೆ. ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಮತ್ತು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಪ್ರೀತಿ ಪ್ರೇಮದ ಹೆಸರಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ: ಲವ್ ಜಿಹಾದ್ಗೆ ಬಲಿಯಾದ ಹಿಂದೂ ಯುವತಿ ರೀಟಾ
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?
ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!
3 ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ
ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ

