Video: ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ಪಿಯುಸಿ ವಿದ್ಯಾರ್ಥಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

Updated on: Feb 06, 2026 | 3:50 PM

ಉತ್ತರ ಪ್ರದೇಶದ ಮೈನ್​ಪುರಿಯಲ್ಲಿ 12ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ತುಟಿಗೆ ಕಚ್ಚಿ ತುಂಡರಿಸಿದ್ದಾನೆ. ಈ ಭೀಕರ ಘಟನೆಯಲ್ಲಿ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಾವಳಿಗಳು ವೈರಲ್ ಆಗಿವೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ಪರಾರಿಯಾಗಿರುವ ವಿದ್ಯಾರ್ಥಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆತನ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.

12ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಿಕ್ಷಕಿ ತನ್ನ ಪ್ರೀತಿ ಪ್ರೀತಿಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲೇ ಶಿಕ್ಷಕಿಯ ತುಟಿಗೆ ಕಚ್ಚಿ ತುಂಡರಿಸಿದ ಭೀಕರ ಘಟನೆ ಉತ್ತರ ಪ್ರದೇಶದ ಮೈನ್​ಪುರಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಶಿಕ್ಷಕಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಶಿಕ್ಷಕಿಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಫತೇ ಬಹದ್ದೂರ್ ಸಿಂಗ್ ತಿಳಿಸಿದ್ದಾರೆ. ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಮತ್ತು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಪ್ರೀತಿ ಪ್ರೇಮದ ಹೆಸರಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ: ಲವ್ ಜಿಹಾದ್​​ಗೆ ಬಲಿಯಾದ ಹಿಂದೂ ಯುವತಿ ರೀಟಾ

 

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More