AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ಸೇವನೆ ಆರೋಪಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ: ಹಣಕ್ಕೆ ಬೇಡಿಕೆ ಇಟ್ಟಿದ್ದರಾ ಪೊಲೀಸರು?

ಗಾಂಜಾ ಸೇವನೆ ಆರೋಪಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ: ಹಣಕ್ಕೆ ಬೇಡಿಕೆ ಇಟ್ಟಿದ್ದರಾ ಪೊಲೀಸರು?

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Apr 28, 2026 | 3:14 PM

Share

ಧಾರವಾಡದಲ್ಲಿ ಬಿಎಸ್‌ಸಿ ವಿದ್ಯಾರ್ಥಿ ಆದಿತ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾಗಿರಿ ಠಾಣೆ ಪೊಲೀಸರು ಗಾಂಜಾ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆಯಿಟ್ಟಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಆದಿತ್ಯ ಗಾಂಜಾ ಸೇವಿಸಿರಲಿಲ್ಲ ಎಂದು ವರದಿ ದೃಢಪಡಿಸಿತ್ತು. ಆದರೂ ಪೊಲೀಸರ ಮತ್ತು ಮಧ್ಯವರ್ತಿಯ ಹಣದ ಬೇಡಿಕೆ, ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಆರೋಪಿಸಲಾಗಿದ್ದು, ತನಿಖೆಗೆ ಒತ್ತಾಯಿಸಲಾಗಿದೆ.

ಧಾರವಾಡ, ಏಪ್ರಿಲ್​​ 28: ಗಾಂಜಾ ಸೇವನೆ ಆರೋಪಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದ ಗಿರಿನಗರದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಬೇಲೂರು ನಿವಾಸಿ ಆದಿತ್ಯ ಮ್ಯಾಗೇರಿ(20) ನೇಣಿಗೆ ಶರಣಾದ ವಿದ್ಯಾರ್ಥಿಯಾಗಿದ್ದು, ಧಾರವಾಡದ ಕಿಟೆಲ್ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ. ಗಿರಿನಗರ ಬಡಾವಣೆಯಲ್ಲಿ ರೂಮ್ ಮಾಡಿಕೊಂಡಿದ್ದ ವಿದ್ಯಾರ್ಥಿ ಆದಿತ್ಯಗೆ 2 ದಿನಗಳಿಂದ ಪೊಲೀಸರು ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಗಾಂಜಾ ಸೇವನೆ ಆರೋಪದಲ್ಲಿ ಆದಿತ್ಯ ಸೇರಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ನೆಗೆಟಿವ್​ ವರದಿ ಬಂದಿದ್ದರಿಂದ ಆದಿತ್ಯನನ್ನು ಬಿಟ್ಟು ಕಳುಹಿಸಲಾಗಿತ್ತು. ನಂತರ ಹಣ ನೀಡುವಂತೆ ಪೊಲೀಸರು ಆದಿತ್ಯನಿಗೆ ಕಾಡುತ್ತಿದ್ದ ಆರೋಪವನ್ನು ಮೃತ ವಿದ್ಯಾರ್ಥಿ ಆದಿತ್ಯ ತಾಯಿ ಕವಿತಾ ಮಾಡಿದ್ದಾರೆ. ಪೊಲೀಸರು ಹಣ ಕೇಳಿದ್ದರಿಂದ ಆತಂಕಗೊಂಡಿದ್ದ ವಿದ್ಯಾರ್ಥಿ ಆದಿತ್ಯ ನಿನ್ನೆ ತಾಯಿಯ ಬಳಿ 2 ಸಾವಿರ ಹಣ ಕೇಳಿದ್ದ. ಆದರೆ ಆಕೆ ಹಣ ನೀಡಲು ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದಿದ್ದ ಆದಿತ್ಯ ನಿನ್ನೆ ರಾತ್ರಿ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us