ಹಂಸಲೇಖ ಹೇಳಿಕೆ ಬೆಂಬಲಿಸಿದ ಪ್ರಗತಿಪರ ಸಂಘಟನೆಗಳು; ಅವರಿಗೆ ಭದ್ರತೆ ನೀಡುವಂತೆ ಮನವಿ

Hamsalekha: ಸಂಗೀತ ನಿರ್ದೇಶಕ ಹಂಸಲೇಖ ಅವರ ಹೇಳಿಕೆಯನ್ನು ಬೆಂಬಲಿಸಿ ವಿದ್ಯಾರ್ಥಿಗಳು ಹಾಗೂ ಪ್ರಗತಿಪರ ಸಂಘಟನೆಗಳು ಧರಣಿ ನಡೆಸಿವೆ.

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಭಾಷಣವೊಂದರಲ್ಲಿ ಮಾತನಾಡುತ್ತಾ, ಪೇಜಾವರ ಶ್ರೀ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಪಟ್ಟಂತೆ ಅವರನ್ನು ಬೆಂಬಲಿಸಿ ಹಲವು ಸಂಘಟನೆಗಳು ರಾಜ್ಯದ ಹಲವೆಡೆ ಧರಣಿ ನಡೆಸಿವೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹಂಸಲೇಖ ಹೇಳಿಕೆ ಬೆಂಬಲಿಸಿ ಮತ್ತು ಬ್ರಾಹ್ಮಣ್ಯವಾದ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.  ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿಭಾಗದ ನೂರಾರು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಹಂಸಲೇಖ ಅವರಿಗೆ ಸೂಕ್ತ ಭದ್ರತೆ ನೀಡುವಂತೆ ಮನವಿ ಸಲ್ಲಿಸಲಾಗಿದೆ.

ಚಿತ್ರದುರ್ಗ ನಗರದಲ್ಲಿ ಪ್ರಗತಿಪರ ಸಂಘಟನೆಗಳಿಂದ ಇಂದು ಧರಣಿ ನಡೆಸಲಾಗಿದ್ದು, ‘ಹಂಸಲೇಖ ಪರ ನಾವಿದ್ದೇವೆ’ ಎಂದು ಘೋಷಿಸಲಾಗಿದೆ. ಹಂಸಲೇಖ ಅವರ ಪೇಜಾವರ ಶ್ರೀ ಕುರಿತ ಹೇಳಿಕೆ ಹಾಗೂ ಆಹಾರ ಪದ್ಧತಿಯ ಕುರಿತ ಹೇಳಿಕೆಗಳಿಗೆ ಬೆಂಬಲ ವ್ಯಕ್ತಪಡಿಸಿ, ಸಂಘಟನೆಗಳು ಧರಣಿ ನಡೆಸಿವೆ.

ಇದನ್ನೂ ಓದಿ:

ಪೇಜಾವರ ಶ್ರೀಗಳ ವಿರುದ್ದ ಹಂಸಲೇಖ ಅಕ್ಷೆಪಾರ್ಹ ಹೇಳಿಕೆ ವಿಚಾರ; ಬಸವನಗುಡಿ ಪೊಲೀಸ್ ಠಾಣೆಯಲ್ಲಿ FIR ದಾಖಲು

ಕೃತಿ ಶೆಟ್ಟಿ ಬೆಂಬಲಕ್ಕೆ ನಿಂತ ನಾಗ ಚೈತನ್ಯ; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ

Click on your DTH Provider to Add TV9 Kannada