ಆಂಧ್ರದ ಶಾಲೆಯಲ್ಲಿ ಟೀಚರ್ ಕಾಲಿಗೆ ಮಸಾಜ್ ಮಾಡಿದ ಮಕ್ಕಳು; ವಿಡಿಯೋ ವೈರಲ್
ಸಮವಸ್ತ್ರ ಧರಿಸಿದ ಇಬ್ಬರು ವಿದ್ಯಾರ್ಥಿನಿಯರು ನೆಲದ ಮೇಲೆ ಪಕ್ಕದಲ್ಲಿ ಕುಳಿತಿರುವಾಗ ಶಿಕ್ಷಕಿ ಕುರ್ಚಿಯ ಮೇಲೆ ಒರಗಿಕೊಂಡು ಕಾಲುಗಳನ್ನು ಚಾಚಿರುವುದನ್ನು ಕಾಣಬಹುದು. ತರಗತಿಯ ಸಮಯದಲ್ಲಿ ಚಿತ್ರೀಕರಿಸಲಾದ ವೀಡಿಯೊ, ಮಕ್ಕಳ ಮೇಲೆ ಅಧಿಕಾರ ದುರುಪಯೋಗ ಮತ್ತು ಸರ್ಕಾರಿ ಶಾಲೆಗಳಲ್ಲಿ ಬುಡಕಟ್ಟು ಮಕ್ಕಳ ಮೇಲೆ ದೌರ್ಜನ್ಯ ಎಸಗುತ್ತಿರುವ ಬಗ್ಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಹೈದರಾಬಾದ್, ನವೆಂಬರ್ 4: ಆಂಧ್ರ ಪ್ರದೇಶದ (Andhra Pradesh) ಬುಡಕಟ್ಟು ಶಾಲೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಕರಿಗೆ ಕಾಲಿಗೆ ಮಸಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಇದರ ಬಳಿಕ ಆ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಂಡಪಲ್ಲಿ ಬುಡಕಟ್ಟು ಬಾಲಕಿಯರ ಆಶ್ರಮ ಶಾಲೆಯ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಆ ಶಿಕ್ಷಕಿ ಫೋನ್‌ನಲ್ಲಿ ಮಾತನಾಡುತ್ತಿರುವಾಗ ಮಕ್ಕಳು ಆಕೆಯ ಕಾಲಿಗೆ ಮಸಾಜ್ ಮಾಡುತ್ತಿದ್ದಾರೆ.
ಈ ವಿಡಿಯೋ ವೈರಲ್ ಆದ ಸ್ವಲ್ಪ ಸಮಯದ ನಂತರ, ಸೀತಾಂಪೇಟದ ಸಮಗ್ರ ಬುಡಕಟ್ಟು ಅಭಿವೃದ್ಧಿ ಸಂಸ್ಥೆ (ಐಟಿಡಿಎ) ಅಧಿಕಾರಿಗಳು ಈ ವಿಷಯವನ್ನು ತಿಳಿದುಕೊಂಡು ತನಿಖೆಗೆ ಆದೇಶಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಶಿಕ್ಷಕಿಯನ್ನು ಅಮಾನತು ಮಾಡಿ ನೋಟಿಸ್ ನೀಡಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

