ತಮ್ಮೂರಲ್ಲಿ ಬಸ್ ನಿಲ್ಲಿಸದ ಕಾರಣ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳು ಚಾಮರಾಜನಗರ-ಮೈಸೂರು ಹೆದ್ದಾರಿ ಬಂದ್ ಮಾಡಿದರು!

ತಮ್ಮೂರಲ್ಲಿ ಬಸ್ ನಿಲ್ಲಿಸದ ಕಾರಣ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳು ಚಾಮರಾಜನಗರ-ಮೈಸೂರು ಹೆದ್ದಾರಿ ಬಂದ್ ಮಾಡಿದರು!

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Nov 16, 2022 | 1:11 PM

ಪೊಲೀಸರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಮನವೊಲಿಸಿದ ಬಳಿಕ ವಿದ್ಯಾರ್ಥಿಗಳು ರಸ್ತೆತಡೆ ಮುಷ್ಕರ ನಿಲ್ಲಿಸಿದರು.

ಚಾಮರಾಜನಗರಕ್ಕೆ ಹತ್ತಿರದ ಬದನಕುಪ್ಪೆ (Badanakuppe) ಗ್ರಾಮದ ವಿದ್ಯಾರ್ಥಿಗಳು ಬುಧವಾರದಂದು ಚಾಮರಾಜನಗರ-ಮೈಸೂರು (Chamarajanagar-Mysuru) ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ ವಾಹನಗಳ ಸಂಚಾರಕ್ಕೆ ಸುಮಾರು ಒಂದು ಗಂಟೆಕಾಲ ಅಡ್ಡಿಯುಂಟು ಮಾಡಿದರು. ಬದನಕುಪ್ಪೆ ಬಸ್ ಸ್ಟಾಪ್ ನಲ್ಲಿ ಬಸ್ಸುಗಳನ್ನು ನಿಲ್ಲಿಸದ ಕಾರಣ ತಮಗೆ ಶಾಲಾ ಕಾಲೇಜುಗಳಿಗೆ ಹೋಗುವುದು ತೊಂದರೆಯಾಗುತ್ತಿದೆ ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಪದೇಪದೆ ದೂರಿದರೂ ಯಾವುದೇ ಕ್ರಮ ಜರುಗಿಸುತ್ತಿಲ್ಲ ಹಾಗಾಗಿ ರಸ್ತೆತಡೆ (raasta roko) ಮಾಡುವ ಮೂಲಕ ಸಂಬಂಧಪಟ್ಟವರ ಗಮನ ಸೆಳೆಯಲು ಪ್ರಯತ್ನಿಸಿದ್ದೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಮನವೊಲಿಸಿದ ಬಳಿಕ ವಿದ್ಯಾರ್ಥಿಗಳು ರಸ್ತೆತಡೆ ಮುಷ್ಕರ ನಿಲ್ಲಿಸಿದರು.