ಇವರು ಶಾಲೆ ಮಕ್ಕಳಾ ಅಲ್ಲಾ ಸರಕುಗಳಾ? ಗೂಡ್ಸ್ ರೀತಿ ವಿದ್ಯಾರ್ಥಿಗಳ ಟಿಪ್ಪರ್ ಲಾರೀಲಿ ತುಂಬಿಕೊಂಡು ಹೋದ ಶಿಕ್ಷಕರು!

Edited By:

Updated on: Feb 12, 2026 | 9:52 AM

ದಕ್ಷಿಣ ಕನ್ನಡ ಜಿಲ್ಲೆಯ ಬಳೆಂಜ ಎಂಬಲ್ಲಿ ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನಕ್ಕಾಗಿ ಟಿಪ್ಪರ್ ಹಾಗೂ ಪಿಕ್​ಅಪ್ ವಾಹನಗಳಲ್ಲಿ ಸರಕು ಸಾಗಾಟ ಮಾಡಿದಂತೆ ಕರೆದೊಯ್ದ ಘಟನೆ ನನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಈ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳು ಗಮನಹರಿಸಿ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಆಗಬಾರದು ಎಂಬುದು ಪೋಷಕರ ಆಗ್ರಹವಾಗಿದೆ.

ಮಂಗಳೂರು, ಫೆಬ್ರವರಿ 12: ಶಾಲಾ ಮಕ್ಕಳನ್ನು ಟಿಪ್ಪರ್ ಹಾಗೂ ಪಿಕಪ್ ವಾಹನಗಳಲ್ಲಿ ಸಾಗಾಟ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳೆಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಜೇನು ಕೃಷಿ ಅಧ್ಯಯನಕ್ಕಾಗಿ ವಿದ್ಯಾರ್ಥಿಗಳನ್ನು ಸರಕುಗಳಂತೆ ವಾಹನಗಳಲ್ಲಿ ಕರೆದೊಯ್ಯಲಾಗಿದೆ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆದೊಯ್ಯಬೇಕಾದ ಜವಾಬ್ದಾರಿ ಹೊಂದಿರುವ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕಿರಣ್ ಅವರೇ ಈ ವ್ಯವಸ್ಥೆ ಮಾಡಿಸಿದ್ದಾಗಿ ತಿಳಿದುಬಂದಿದೆ. ಟಿಪ್ಪರ್ ಹಾಗೂ ಪಿಕಪ್ ವಾಹನಗಳಲ್ಲಿ ಮಕ್ಕಳನ್ನು ಕೂರಿಸಿಕೊಂಡು ಸಾಗಾಟ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕಾನೂನು ಪ್ರಕಾರ, ಕೂಲಿ ಕಾರ್ಮಿಕರನ್ನೂ ಕೂಡ ಈ ರೀತಿಯ ವಾಹನಗಳಲ್ಲಿ ಕರೆದೊಯ್ಯುವಂತಿಲ್ಲ. ಹೀಗಿದ್ದೂ ವಿದ್ಯಾರ್ಥಿಗಳನ್ನೇ ಈ ರೀತಿಯಲ್ಲಿ ಕರೆದೊಯ್ದಿರುವುದು ಗಂಭೀರ ನಿರ್ಲಕ್ಷ್ಯವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ ಶತಮಾನೋತ್ಸವ ಸಂಭ್ರಮಾಚರಣೆ ನಡೆಸಿದ್ದ ಶಾಲೆಯಲ್ಲಿ ಇಂತಹ ಘಟನೆ ನಡೆದಿರುವುದು ಪ್ರಶ್ನೆಗಳನ್ನು ಹುಟ್ಟಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More