2nd PUC Result 2025; ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಶುಲ್ಕ ತೆರಬೇಕಿಲ್ಲ: ಮಧು ಬಂಗಾರಪ್ಪ
2nd PUC Result 2025; ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಇವತ್ತೇ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಲಾಗಿದೆ ಮತ್ತು ನಾಳೆಯಿಂದಲೇ ವಿಶೇಷ ತರಗತಿಗಳು ಆರಂಭಗೊಳ್ಳಲಿವೆ ಎಂದು ಸಚಿವ ಹೇಳಿದರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ಜಾಸ್ತಿಯಿರುವುದರಿಂದ ಬೆಳಗ್ಗೆ ಇಲ್ಲವೇ ಸಾಯಂಕಾಲ ಹೊತ್ತಲ್ಲಿ ಸ್ಪೆಷಲ್ ಕ್ಲಾಸ್ಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಧು ಬಂಗಾರಪ್ಪ ಹೇಳಿದರು.
ಬೆಂಗಳೂರು, ಏಪ್ರಿಲ್ 8: ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಫೇಲಾದ ವಿದ್ಯಾರ್ಥಿಗಳಿಗೆ ಮತ್ತು ಪಾಸಾದರೂ ಕಡಿಮೆ ಅಂಕಗಳನ್ನು ಪಡೆದು ಫಲಿತಾಂಶವನ್ನು ಮತ್ತಷ್ಟು ಇಂಪ್ರೂವ್ ಮಾಡಿಕೊಳ್ಳಬಯಸುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದರು. ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕವನ್ನು ತೆರಬೇಕಿಲ್ಲ. ಈ ಸೌಲಭ್ಯವನ್ನು ಕೇವಲ ಈ ವರ್ಷಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ, ಮುಂದಿನ ವರ್ಷ ಎಂದಿನಂತೆ ಪ್ರತಿ ಸಬ್ಜೆಕ್ಟ್ಗೆ ಇಷ್ಟಿಷ್ಟು ಅಂತ ಫೀ ಕಲೆಕ್ಟ್ ಮಾಡಲಾಗುವುದು ಎಂದು ಸಚಿವ ಹೇಳಿದರು.
ಇದನ್ನೂ ಓದಿ: ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್ ಪುತ್ರಿ ಕರ್ನಾಟಕಕ್ಕೆ ಫಸ್ಟ್
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ