2nd PUC Result 2025; ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಶುಲ್ಕ ತೆರಬೇಕಿಲ್ಲ: ಮಧು ಬಂಗಾರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Apr 08, 2025 | 3:14 PM

2nd PUC Result 2025; ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಇವತ್ತೇ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಲಾಗಿದೆ ಮತ್ತು ನಾಳೆಯಿಂದಲೇ ವಿಶೇಷ ತರಗತಿಗಳು ಆರಂಭಗೊಳ್ಳಲಿವೆ ಎಂದು ಸಚಿವ ಹೇಳಿದರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ಜಾಸ್ತಿಯಿರುವುದರಿಂದ ಬೆಳಗ್ಗೆ ಇಲ್ಲವೇ ಸಾಯಂಕಾಲ ಹೊತ್ತಲ್ಲಿ ಸ್ಪೆಷಲ್ ಕ್ಲಾಸ್​ಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಧು ಬಂಗಾರಪ್ಪ ಹೇಳಿದರು.

ಬೆಂಗಳೂರು, ಏಪ್ರಿಲ್ 8: ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಫೇಲಾದ ವಿದ್ಯಾರ್ಥಿಗಳಿಗೆ ಮತ್ತು ಪಾಸಾದರೂ ಕಡಿಮೆ ಅಂಕಗಳನ್ನು ಪಡೆದು ಫಲಿತಾಂಶವನ್ನು ಮತ್ತಷ್ಟು ಇಂಪ್ರೂವ್ ಮಾಡಿಕೊಳ್ಳಬಯಸುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದರು. ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕವನ್ನು ತೆರಬೇಕಿಲ್ಲ. ಈ ಸೌಲಭ್ಯವನ್ನು ಕೇವಲ ಈ ವರ್ಷಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ, ಮುಂದಿನ ವರ್ಷ ಎಂದಿನಂತೆ ಪ್ರತಿ ಸಬ್ಜೆಕ್ಟ್​ಗೆ ಇಷ್ಟಿಷ್ಟು ಅಂತ ಫೀ ಕಲೆಕ್ಟ್ ಮಾಡಲಾಗುವುದು ಎಂದು ಸಚಿವ ಹೇಳಿದರು.

ಇದನ್ನೂ ಓದಿ:  ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.