ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಬಗ್ಗೆ ನಿರ್ದೇಶಕ ಹೇಳಿದ್ದೇನು?
ನಿರ್ದೇಶಕ ಜೆ.ಪಿ. ತುಮಿನಾಡು ಅವರು ‘ಸು ಫ್ರಮ್ ಸೋ’ ಸಿನಿಮಾ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಈ ಸಿನಿಮಾಗೆ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ಶೋಗಳ ಸಂಖ್ಯೆ ಹೆಚ್ಚಾಗುತ್ತಿದೆ. ಶನಿವಾರ (ಜುಲೈ 26) ಮತ್ತು ಭಾನುವಾರ (ಜುಲೈ 27) ಎಲ್ಲ ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಆಗಿದೆ. ಆ ಬಗ್ಗೆ ಜೆಪಿ ತುಮಿನಾಡು ಅವರು ಮಾತನಾಡಿದ್ದಾರೆ.
ನಿರ್ದೇಶಕ ಜೆ.ಪಿ. ತುಮಿನಾಡು ಅವರು ‘ಸು ಫ್ರಮ್ ಸೋ’ (Su From So) ಸಿನಿಮಾ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಈ ಸಿನಿಮಾಗೆ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ಶೋಗಳ ಸಂಖ್ಯೆ ಹೆಚ್ಚಾಗುತ್ತಿದೆ. ಶನಿವಾರ (ಜುಲೈ 26) ಮತ್ತು ಭಾನುವಾರ (ಜುಲೈ 27) ಎಲ್ಲ ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಆಗಿದೆ. ಆ ಬಗ್ಗೆ ಜೆಪಿ ತುಮಿನಾಡು ಅವರು ಮಾತನಾಡಿದ್ದಾರೆ. ‘ಕಲೆಕ್ಷನ್ ಬಿಡಿ, ಎಷ್ಟು ಶೋ ಆಗುತ್ತಿದೆ ಎಂಬುದೇ ನನಗೆ ಗೊತ್ತಾಗುತ್ತಿಲ್ಲ. ಪ್ರತಿ ಗಂಟೆಯೂ ಶೋ ಜಾಸ್ತಿ ಆಗುತ್ತಿದೆ. ತುಂಬಾ ಖುಷಿಯಲ್ಲಿ ಇದ್ದೇನೆ. ಕಲೆಕ್ಷನ್ ಬಗ್ಗೆ ನಾನು ಯೋಚನೆಯನ್ನೇ ಮಾಡುತ್ತಿಲ್ಲ’ ಎಂದು ಜೆಪಿ ತುಮಿನಾಡು (JP Thuminad) ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
