ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಬಗ್ಗೆ ನಿರ್ದೇಶಕ ಹೇಳಿದ್ದೇನು?

Edited By:

Updated on: Jul 27, 2025 | 9:43 AM

ನಿರ್ದೇಶಕ ಜೆ.ಪಿ. ತುಮಿನಾಡು ಅವರು ‘ಸು ಫ್ರಮ್ ಸೋ’ ಸಿನಿಮಾ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಈ ಸಿನಿಮಾಗೆ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ಶೋಗಳ ಸಂಖ್ಯೆ ಹೆಚ್ಚಾಗುತ್ತಿದೆ. ಶನಿವಾರ (ಜುಲೈ 26) ಮತ್ತು ಭಾನುವಾರ (ಜುಲೈ 27) ಎಲ್ಲ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಆಗಿದೆ. ಆ ಬಗ್ಗೆ ಜೆಪಿ ತುಮಿನಾಡು ಅವರು ಮಾತನಾಡಿದ್ದಾರೆ.

ನಿರ್ದೇಶಕ ಜೆ.ಪಿ. ತುಮಿನಾಡು ಅವರು ‘ಸು ಫ್ರಮ್ ಸೋ’ (Su From So) ಸಿನಿಮಾ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಈ ಸಿನಿಮಾಗೆ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ಶೋಗಳ ಸಂಖ್ಯೆ ಹೆಚ್ಚಾಗುತ್ತಿದೆ. ಶನಿವಾರ (ಜುಲೈ 26) ಮತ್ತು ಭಾನುವಾರ (ಜುಲೈ 27) ಎಲ್ಲ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಆಗಿದೆ. ಆ ಬಗ್ಗೆ ಜೆಪಿ ತುಮಿನಾಡು ಅವರು ಮಾತನಾಡಿದ್ದಾರೆ. ‘ಕಲೆಕ್ಷನ್ ಬಿಡಿ, ಎಷ್ಟು ಶೋ ಆಗುತ್ತಿದೆ ಎಂಬುದೇ ನನಗೆ ಗೊತ್ತಾಗುತ್ತಿಲ್ಲ. ಪ್ರತಿ ಗಂಟೆಯೂ ಶೋ ಜಾಸ್ತಿ ಆಗುತ್ತಿದೆ. ತುಂಬಾ ಖುಷಿಯಲ್ಲಿ ಇದ್ದೇನೆ. ಕಲೆಕ್ಷನ್ ಬಗ್ಗೆ ನಾನು ಯೋಚನೆಯನ್ನೇ ಮಾಡುತ್ತಿಲ್ಲ’ ಎಂದು ಜೆಪಿ ತುಮಿನಾಡು (JP Thuminad) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More