ದುಬೈನಲ್ಲಿ ‘ಸು ಫ್ರಮ್ ಸೋ’ ತಂಡಕ್ಕೆ ಹೇಗಿತ್ತು ನೋಡಿ ಸ್ವಾಗತ; ಇಲ್ಲಿದೆ ವಿಡಿಯೋ

Updated on: Aug 26, 2025 | 12:49 PM

‘ಸು ಫ್ರಮ್ ಸೋ’ ಕೇವಲ ಕರ್ನಾಟಕದ ಸಿನಿಮಾ ಆಗಿ ಮಾತ್ರ ಉಳಿದುಕೊಂಡಿಲ್ಲ. ವಿದೇಶದಲ್ಲೂ ಚಿತ್ರವನ್ನು ನೋಡಿ ಮೆಚ್ಚಿಕೊಂಡವರು ಇದ್ದಾರೆ. ಈ ಸಿನಿಮಾದ ವಿಶೇಷ ಶೋ ದುಬೈನಲ್ಲಿ ಆಯೋಜನೆ ಮಾಡಲಾಗಿತ್ತು. ಆ ಶೋನ ವಿಡಿಯೋನ ತಂಡದವರು ಹಂಚಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಸು ಫ್ರಮ್ ಸೋ’ ಸಿನಿಮಾ (Su From So) ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆ ನಿರೀಕ್ಷೆಯನ್ನು ಮೀರಿ ಸಿನಿಮಾ ಗೆಲುವು ಕಂಡಿದೆ. ಕೇವಲ ಕರ್ನಾಟಕ ಮಾತ್ರವಲ್ಲದೆ, ಪರಭಾಷೆಗಳಲ್ಲೂ ಚಿತ್ರ ಎಲ್ಲರ ಮನ ಗೆದ್ದಿದೆ. ವಿದೇಶದಲ್ಲೂ ಸಿನಿಮಾನ ಜನರು ಮೆಚ್ಚಿಕೊಂಡಿದ್ದಾರೆ. ದುಬೈನಲ್ಲಿ ಸಿನಿಮಾ ತಂಡಕ್ಕೋಸ್ಕರ ವಿಶೇಷ ಶೋ ಆಯೋಜನೆ ಮಾಡಲಾಗಿತ್ತು. ಈ ಶೋನಲ್ಲಿ ತಂಡದವರು ಭಾಗಿ ಆಗಿದ್ದರು. ರಾಜ್ ಬಿ ಶೆಟ್ಟಿ, ಜೆಪಿ ತುಮಿನಾಡ್ ಮೊದಲಾದವರು ಈ ಸಂದರ್ಭದಲ್ಲಿ ಇದ್ದರು. ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More