ಸುಬ್ರಹ್ಮಣ್ಯನ ಕೃಪೆಗೆ ಪಾತ್ರರಾಗಲು ಇದು ಸುದಿನ! 12 ರಾಶಿಗಳ ದಿನ ಭವಿಷ್ಯ ವಿವರಣೆ ಇಲ್ಲಿದೆ

Updated on: Jul 21, 2026 | 6:32 AM

2026 ಜುಲೈ 21, ಮಂಗಳವಾರದ ಪಂಚಾಂಗ ವಿವರಗಳನ್ನು ಹಾಗೂ ದ್ವಾದಶ ರಾಶಿಗಳ ಫಲಾಫಲವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ‘ಟಿವಿ9’ ಕನ್ನಡ ಡಿಜಿಟಲ್ ವಾಹಿನಿಯ ದಿನಭವಿಷ್ಯ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಪರಾಭವನಾಮ ಸಂವತ್ಸರ, ಆಷಾಢ ಮಾಸದ ಅಷ್ಟಮಿ, ಚಿತ್ತಾ ನಕ್ಷತ್ರ, ರಾಹುಕಾಲ ಹಾಗೂ ಸಂಕಲ್ಪ ಕಾಲದ ಮಹತ್ವವನ್ನು ವಿವರಿಸಿದ್ದು, ಸುಬ್ರಹ್ಮಣ್ಯ ಸ್ವಾಮಿಯ ಕೃಪೆಗೆ ಪಾತ್ರರಾಗುವ ದಿನದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಇಂದು 2026ರ ಜುಲೈ 21, ಮಂಗಳವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷದ ಅಷ್ಟಮಿ, ಚಿತ್ತಾ ನಕ್ಷತ್ರ, ಸಿದ್ಧ ಯೋಗ ಮತ್ತು ವಣಿಕ ಕರಣ ಇರಲಿದೆ. ಈ ದಿನದ ರಾಹುಕಾಲವು ಮಧ್ಯಾಹ್ನ 3 ಗಂಟೆ 26 ನಿಮಿಷದಿಂದ ಸಂಜೆ 5 ಗಂಟೆ 11 ನಿಮಿಷದ ತನಕ ಇರುತ್ತದೆ. ಇನ್ನು ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭ ಕಾಲವು ಬೆಳಗ್ಗೆ 10 ಗಂಟೆ 50 ನಿಮಿಷದಿಂದ ಮಧ್ಯಾಹ್ನ 12 ಗಂಟೆ 25 ನಿಮಿಷದ ತನಕ ವ್ಯಾಪಿಸಿದೆ. ಇದು ಒಂದು ಮಹಾ ಪರ್ವ ದಿನವಾಗಿದೆ ಎಂದು ‘ಟಿವಿ9’ ಕನ್ನಡ ಡಿಜಿಟಲ್ ವಾಹಿನಿಯ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಅಲ್ಲದೆ, ಮೇಷಾದಿ 12 ರಾಶಿಗಳ ದಿನ ಭವಿಷ್ಯವನ್ನೂ ವಿವರಿಸಿದ್ದಾರೆ.

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More