2nd PUC ಪರೀಕ್ಷೆಯಲ್ಲಿ ಆಟೋ ಚಾಲಕನ ಮಗನಿಗೆ ರಾಜ್ಯಕ್ಕೆ 6ನೇ ರ‍್ಯಾಂಕ್: ವಿಕಾಸ್ ಹೇಳಿದ್ದೇನು ನೋಡಿ!

Edited By:

Updated on: Apr 11, 2026 | 9:37 AM

ರಾಯಚೂರಿನ ಆಟೋ ಚಾಲಕನ ಮಗ ವಿಕಾಸ್, 2ನೇ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಆರನೇ ರ‍್ಯಾಂಕ್ ಮತ್ತು ಜಿಲ್ಲೆಗೆ ಪ್ರಥಮ ರ‍್ಯಾಂಕ್ ಪಡೆದಿದ್ದಾನೆ. ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿಯಾಗಿರುವ ವಿಕಾಸ್‌ನ ಈ ಸಾಧನೆಗೆ ಪೋಷಕರು ಮತ್ತು ಶಿಕ್ಷಕರ ಬೆಂಬಲವೇ ಕಾರಣ. ಟಿವಿ9 ಜತೆ ವಿಕಾಸ ನಡೆಸಿರುವ ಮಾತುಕತೆ ಇಲ್ಲಿದೆ.

ರಾಯಚೂರು, ಏಪ್ರಿಲ್ 11: ರಾಯಚೂರು ಜಿಲ್ಲೆಯ ವಿದ್ಯಾರ್ಥಿ ವಿಕಾಸ್, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಆರನೇ ರ‍್ಯಾಂಕ್ ಮತ್ತು ರಾಯಚೂರು ಜಿಲ್ಲೆಗೆ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು ರಾಯಚೂರು ನಗರದ ಆಟೋ ಚಾಲಕ ಹನಮಂತು ಅವರ ಮಗ. ವಿದ್ಯಾನಿಧಿ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿರುವ ವಿಕಾಸ್, ತಮ್ಮ ಈ ಯಶಸ್ಸಿಗೆ ಕಾಲೇಜಿನ ಉಪನ್ಯಾಸಕರು, ಪೋಷಕರು ಮತ್ತು ಅಕ್ಕ ನೀಡಿದ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಿದ್ದಾರೆ. ತಮ್ಮ ತಂದೆಯ ಪರಿಶ್ರಮವನ್ನು ಕಣ್ಣಾರೆ ಕಂಡ ವಿಕಾಸ್, ಅದಕ್ಕೆ ತಕ್ಕ ಪ್ರತಿಫಲ ನೀಡಲು ಸತತವಾಗಿ ಶ್ರಮಿಸಿದ್ದಾರೆ. ಮುಂದೆ ಬಿಕಾಂ ಪದವಿಯೊಂದಿಗೆ ಸಿಎ ಓದುವ ಗುರಿಯನ್ನು ಹೊಂದಿದ್ದಾರೆ. ವಿಕಾಸ್ ‘ಟಿವಿ9’ ಜತೆ ನಡೆಸಿರುವ ಮಾತುಕತೆ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More