AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ

ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ

ಸುಷ್ಮಾ ಚಕ್ರೆ
|

Updated on: Apr 17, 2026 | 5:22 PM

Share

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ "ಜಾದೂ" ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಕಂಗನಾ ರಣಾವತ್ ರಾಹುಲ್ ಗಾಂಧಿಯವರ ವಿರುದ್ಧ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ದೊಡ್ಡ "ತಲೆನೋವು" ಎಂದು ಹೇಳಿದ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಬಾಲ್ಯದಲ್ಲಿ ಕಂಡ ಮ್ಯಾಜಿಕ್ ಪ್ರದರ್ಶನದಿಂದಾಗಿ ಅವರು ಬಾಲ್ಯದ ಆಘಾತವನ್ನು ಅನುಭವಿಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ನವದೆಹಲಿ, ಏಪ್ರಿಲ್ 17: ಲೋಕಸಭೆಯಲ್ಲಿ ಇಂದು ರಾಹುಲ್ ಗಾಂಧಿ (Rahul Gandhi) ಮಾಡಿದ ಭಾಷಣದ ಬಗ್ಗೆ ಬಿಜೆಪಿ ಸಂಸದೆ ಕಂಗನಾ ರಣಾವತ್ ಟೀಕಾಪ್ರಹಾರ ನಡೆಸಿದ್ದಾರೆ. “ಅವರ ಮಾತು ಕೇಳುವುದು ತುಂಬಾ ತಲೆನೋವು. ಅವರು ಬಾಲ್ಯದ ಆಘಾತಗಳನ್ನು ಅನುಭವಿಸುತ್ತಿದ್ದಾರೆ. ಅವರಿಗೆ ಅದೊಂದು ತೊಂದರೆಯಿದೆ. ಸಭಾಪತಿಯೂ ಅವರಿಗೆ ಭಾಷಣವನ್ನು ನಿಲ್ಲಿಸುವಂತೆ ಸೂಚಿಸಿದರೂ ಅವರು ಸಂಸತ್ತಿನ ಅಣಕ ಮಾಡುತ್ತಲೇ ಇದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಬಾಲ್ಯದಲ್ಲಿ ಕಂಡ ಮ್ಯಾಜಿಕ್ ಪ್ರದರ್ಶನದಿಂದಾಗಿ ಬಾಲ್ಯದ ಆಘಾತವನ್ನು ಅನುಭವಿಸುತ್ತಿದ್ದಾರೆ. ಅದೇ ಕಾರಣಕ್ಕೆ ಇನ್ನೂ ಮ್ಯಾಜಿಕ್ ಹಿಂದೆ ಬಿದ್ದಿದ್ದಾರೆ” ಎಂದು ಕಂಗನಾ ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us