ಟ್ವೀಟ್‌ ವಾರ್ ವಿಚಾರ:  ರಮ್ಯಾ ಆರೋಗ್ಯ ತಪಾಸಣೆ ಮಾಡಿಸಬೇಕು  ಎಂದ ನಲಪಾಡ್ ಗೆ ಪಂಚ್​ ಕೊಟ್ಟ ಮಾಜಿ ಸಂಸದೆ ರಮ್ಯಾ!

ಟ್ವೀಟ್‌ ವಾರ್ ವಿಚಾರ: ರಮ್ಯಾ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದ ನಲಪಾಡ್ ಗೆ ಪಂಚ್​ ಕೊಟ್ಟ ಮಾಜಿ ಸಂಸದೆ ರಮ್ಯಾ!

TV9 Web
| Updated By: ಆಯೇಷಾ ಬಾನು

Updated on:May 12, 2022 | 10:22 PM

ರಮ್ಯಾ ಅವರು ಒಳ್ಳೆಯವರೇ ಚಿಕ್ಕ ವಯಸ್ಸಿನಲ್ಲಿ ಸಂಸದರಾದವರು. ರಮ್ಯಾ ಈಗಾಗಲೇ ಒಳ್ಳೆಯ ಸಾಧನೆಗಳನ್ನು ಮಾಡಿದ್ದಾರೆ. ನಾನು ರಮ್ಯಾ ಅವರ ವಿರುದ್ಧ ಇಲ್ಲ. ನಟಿ ರಮ್ಯಾ ಇಂತಹ ಚೀಪ್ ಪಾಲಿಟಿಕ್ಸ್ ಮಾಡಬಾರದು. ನಟಿ ರಮ್ಯಾ ಅವರ ಆರೋಗ್ಯ ತಪಾಸಣೆ ಮಾಡಿಸಬೇಕು. -ಮೊಹಮ್ಮದ್ ನಲಪಾಡ್

ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌(DK Shivakumar), ರಮ್ಯಾ(Ramya) ಟ್ವೀಟ್‌ ವಾರ್ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್(Mohammed Nalapad) ಪ್ರತಿಕ್ರಿಯಿಸಿದ್ದಾರೆ. ರಮ್ಯಾ ಇಂತಹ ಚೀಪ್ ಪಾಲಿಟಿಕ್ಸ್ ಮಾಡಬಾರದು. ನಟಿ ರಮ್ಯಾರವರ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದಿದ್ದಾರೆ. ರಮ್ಯಾ ಇಷ್ಟು ದಿನ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ. ಇಷ್ಟು ತಿಂಗಳು, ಇಷ್ಟು ವರ್ಷ ರಮ್ಯಾ ಎಲ್ಲಿದ್ದರು? ಎಲ್ಲೂ ಇಲ್ಲದ ರಮ್ಯಾ ಸಡನ್ನಾಗಿ ಯಾಕೆ ಬಂದರು? ರಮ್ಯಾ ತನ್ನ ಅಸ್ತಿತ್ವ ತೋರಿಸಲು ಬಂದಿದ್ದಾರಾ? ನಾನೂ ಒಬ್ಬಳು ಇದೀನಿ ಅಂತ ತೋರಿಸಿಕೊಳ್ಳುತ್ತಿದ್ದಾರಾ? ಯಾವುದಾದರೂ ಒಂದು ಕುರ್ಚಿ ಮೇಲೆ ಟವಲ್ ಹಾಕಲು ರಮ್ಯಾ ಬಂದಿದ್ದಾರಾ? ರಮ್ಯಾ ಬಂದದ್ದು ಯಾಕೆ ಹೀಗೆಲ್ಲ ಮಾಡುತ್ತಿರುವುದು ಯಾವುದಕ್ಕೆ ಅಂತ ನಾವು ಅರ್ಥಮಾಡಿಕೊಳ್ಳಬೇಕು.

ಡಿಕೆ ಶಿವಕುಮಾರ್ ಅವರು ಬಹಳ ಕ್ಲಿಯರಾಗಿ ಇವತ್ತು ಸ್ಪಷ್ಟಪಡಿಸಿದ್ದಾರೆ. ಎಂಬಿ ಪಾಟೀಲ್, ಅಶ್ವತ್ ನಾರಾಯಣ್ ಭೇಟಿ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದ್ದಾರೆ. ಹೌದಪ್ಪ.. ಬಂದಿರಬಹುದು ರಕ್ಷಣೆಗೋಸ್ಕರ ಎಂದು ಹೇಳಿದ್ದಾರೆ. ಎಂಬಿ ಪಾಟೀಲ್ ಹೋಗಿದ್ದಾರೆ ಎಂದು ಎಲ್ಲೂ ಡಿಕೆ ಶಿವಕುಮಾರ್ ಹೇಳಿಲ್ಲ. ಕಾಂಗ್ರೆಸ್‌ ಎಲ್ಲ ನಾಯಕರು ಒಗ್ಗಟ್ಟಾಗಿದ್ದಾರೆ. ಡಿಕೆಶಿ, ಎಂಬಿ ಪಾಟೀಲ್, ಸಿದ್ದರಾಮಯ್ಯ ನಾವೆಲ್ಲ ಜೊತೆಗಿದ್ದೇವೆ. ಸುಮ್ಮನೆ ಡಿಸ್ಟರ್ಬೆನ್ಸ್ ಕ್ರಿಯೇಟ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಮ್ಯಾ ನಾನು ಇನ್ನೂ ಇದ್ದೀನಿ ಎಂದು ತೋರಿಸಿ ಕೊಳ್ಳುತ್ತಿರಬಹುದು. ನನಗೂ ಒಂದು ಕುರ್ಚಿ ಕೊಡಿ ಎಂದು ಟವಲ್ ಹಾಕುತ್ತಿರಬಹುದು. ಈ ವಿಚಾರಕ್ಕೂ ರಮ್ಯಾಗೂ ಏನು ಸಂಬಂಧ. ರಮ್ಯಾ ಅವರ ಹಳೆಯ ಟ್ವೀಟ್ ಗಳನ್ನು ತೆಗೆದುಕೊಂಡು ನೋಡಿ. ಯಾವುದೋ ಸಿನಿಮಾಗಳ ಬಗ್ಗೆ ಮಾತ್ರ ಟ್ವೀಟ್ ಮಾಡಿಕೊಂಡಿದ್ದರು. ಇತ್ತೀಚಿಗೆ ಅವರು ಯಾವುದೇ ರಾಜಕೀಯ ಟ್ವೀಟ್ ಗಳನ್ನು ಮಾಡಿಲ್ಲ. ರಮ್ಯಾ ಸಡನ್ನಾಗಿ ಯಾಕೆ ನಮ್ಮ ನಾಯಕರ ಹಿಂದೆ ಬಿದ್ದಿದ್ದಾರೆ. ಇದರಲ್ಲಿ ಯಾವುದೋ ಒಳ ಉದ್ದೇಶ ಇದೆ. ನಟಿ ರಮ್ಯಾಗೆ ಯಾರು ಹೆಚ್ಚು ಇಂಪಾರ್ಟೆನ್ಸ್ ಕೊಡಬಾರದು ಎಂದು ಉಡುಪಿಯಲ್ಲಿ ಮಾಧ್ಯಮಗಳಿಗೆ ಕೈಮುಗಿದು ನಲಪಾಡ್ ಕೇಳಿಕೊಂಡಿದ್ದಾರೆ.

ರಮ್ಯಾ ಅವರು ಒಳ್ಳೆಯವರೇ ಚಿಕ್ಕ ವಯಸ್ಸಿನಲ್ಲಿ ಸಂಸದರಾದವರು. ರಮ್ಯಾ ಈಗಾಗಲೇ ಒಳ್ಳೆಯ ಸಾಧನೆಗಳನ್ನು ಮಾಡಿದ್ದಾರೆ. ನಾನು ರಮ್ಯಾ ಅವರ ವಿರುದ್ಧ ಇಲ್ಲ. ನಟಿ ರಮ್ಯಾ ಇಂತಹ ಚೀಪ್ ಪಾಲಿಟಿಕ್ಸ್ ಮಾಡಬಾರದು. ನಟಿ ರಮ್ಯಾ ಅವರ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದರು.

ರಮ್ಯಾ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದ ನಲಪಾಡ್ ಗೆ ಪಂಚ್​ ಕೊಟ್ಟ ಮಾಜಿ ಸಂಸದೆ ರಮ್ಯಾ!
ನಟಿ ರಮ್ಯಾ ವಿರುದ್ಧ ಮೊಹಮ್ಮದ್ ನಲಪಾಡ್‌ ಟೀಕೆ ವಿಚಾರಕ್ಕೆ ಸಂಬಂಧಿಸಿ ಹಳೆಯ ಪ್ರಕರಣ ಕೆದಕಿ ಟ್ವೀಟ್‌ ಮಾಡಿ ಮೊಹಮ್ಮದ್ ನಲಪಾಡ್‌ಗೆ ರಮ್ಯಾ ತಿರುಗೇಟು ಕೊಟ್ಟಿದ್ದಾರೆ. ಮೊಹಮ್ಮದ್ ನಲಪಾಡ್‌ ಹ್ಯಾರಿಸ್‌ ಅಪಘಾತ ಪ್ರಕರಣ ಹಾಗೂ ಹಲ್ಲೆ ನಡೆಸಿದ್ದ ಫೋಟೋ ಟ್ವಿಟರ್‌ನಲ್ಲಿ ಹಾಕಿ ರಮ್ಯಾ ತಿರುಗೇಟು ಕೊಟ್ಟಿದ್ದಾರೆ. ಈ ಹುಡುಗ ನಲಪಾಡ್‌ ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ. ಜಾಮೀನಿನ ಮೇಲೆ ಹೊರಗಿರುವ ಶಾಸಕ ಹ್ಯಾರಿಸ್‌ ಪುತ್ರ. ಈತ ನನ್ನ ಪ್ರಾಮಾಣಿಕತೆ ಪ್ರಶ್ನಿಸ್ತಿದ್ದಾರೆ.. ವಾಹ್! ಎಂದು ಟ್ವೀಟ್‌ ಮಾಡಿ ಮೊಹಮ್ಮದ್ ನಲಪಾಡ್‌ಗೆ ರಮ್ಯಾ ತಿರುಗೇಟು ಕೊಟ್ಟಿದ್ದಾರೆ.

Published on: May 12, 2022 07:37 PM