ಏಕಾಏಕಿ ಹೊತ್ತಿ ಉರಿದ ಬಿಎಂಟಿಸಿ ಬಸ್; ಅದೃಷ್ಟವಶಾತ್ ಪ್ರಯಾಣಿಕರು ಪಾರು
ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್ನಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಸಂಭವಿಸಿದೆ.
ಬೆಂಗಳೂರು: ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್ (south end circle) ನಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ (BMTC BUS) ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಕಿಡಿ ಕಾಣುತ್ತಿದ್ದಂತೆ ಸಮಯ ಪ್ರಜ್ಞೆ ಮೇರೆದ ಬಸ್ ಚಾಲಕ ಎಲ್ಲಾ ಪ್ರಯಾಣಿಕರನ್ನ ಬಸ್ನಿಂದ ಕೆಳಗೆ ಇಳಿಸಿದ್ದಾರೆ. ಹಾಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪ್ರಯಾಣಿಕರನ್ನು ಮತ್ತೊಂದು ಬಸ್ ನಲ್ಲಿ ಪ್ರಯಾಣ ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮೆಜೆಸ್ಟಿಕ್ನಿಂದ ಬನಶಂಕರಿ ನಿಲ್ದಾಣಕ್ಕೆ ತೆರಳುತ್ತಿದ್ದ ಬಸ್ ನಂದ ಟಾಕೀಸ್ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿಮ ಯಶಸ್ವಿಯಾಗಿದ್ದಾರೆ. ವಾರದ ಹಿಂದೆಯೂ ಕೂಡ ಬಿಎಂಟಿಸಿ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆಯೊಂದು ಸಂಭವಿಸಿತ್ತು.
ಇದನ್ನೂ ಓದಿ;
ನಟಿ ರಮ್ಯಾ ಜೊತೆಗಿರುವ ರಾಣಿ ಯಾರು? ವಾವ್.. ಆಕಸ್ಮಿಕವಾಗಿ ಸಿಕ್ಕ ಜೀವದ ಬಗ್ಗೆ ಈ ಪರಿ ಪ್ರೀತಿ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

