ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್

Updated on: Dec 31, 2025 | 8:22 PM

Kichcha Sudeep-Darshan: ಸುದೀಪ್ ಅವರನ್ನು ಟಾರ್ಗೆಟ್ ಮಾಡಿರುವ ದರ್ಶನ್ ಅಭಿಮಾನಿಗಳು, ಅವರ ಪುತ್ರಿಯ ಬಗ್ಗೆಯೂ ಕೆಟ್ಟ ಕಮೆಂಟ್​​ಗಳನ್ನು ಮಾಡಿದ್ದಾರೆ. ಇದನ್ನು ಸುದೀಪ್ ಈಗಾಗಲೇ ಖಂಡಿಸಿದ್ದಾರೆ. ಅಲ್ಲದೆ, ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ ಸಹ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಇಂದು ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸುದೀಪ್ ಅವರು, ಸಾನ್ವಿ ಸುದೀಪ್ ಹಂಚಿಕೊಂಡಿರುವ ಪೋಸ್ಟ್ ಬಗ್ಗೆ ಮಾತನಾಡುತ್ತಾ, ‘ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ’ ಎಂದಿದ್ದಾರೆ.

ಮಾರ್ಕ್’ (Mark) ಸಿನಿಮಾದ ಪೈರಸಿ ವಿಚಾರಕ್ಕೆ ಕಿಚ್ಚ ಸುದೀಪ್ ಆಡಿದ ಮಾತು ಆ ನಂತರ ಹಲವು ಕವಲುಗಳಾಗಿ ಒಡೆದು ಏನೇನೋ ಆಗಿದೆ. ಸುದೀಪ್ ಅವರನ್ನು ಟಾರ್ಗೆಟ್ ಮಾಡಿರುವ ದರ್ಶನ್ ಅಭಿಮಾನಿಗಳು, ಅವರ ಪುತ್ರಿಯ ಬಗ್ಗೆಯೂ ಕೆಟ್ಟ ಕಮೆಂಟ್​​ಗಳನ್ನು ಮಾಡಿದ್ದಾರೆ. ಇದನ್ನು ಸುದೀಪ್ ಈಗಾಗಲೇ ಖಂಡಿಸಿದ್ದಾರೆ. ಅಲ್ಲದೆ, ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ ಸಹ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಇಂದು ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸುದೀಪ್ ಅವರು, ಸಾನ್ವಿ ಸುದೀಪ್ ಹಂಚಿಕೊಂಡಿರುವ ಪೋಸ್ಟ್ ಬಗ್ಗೆ ಮಾತನಾಡುತ್ತಾ, ‘ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ