‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ

Updated on: Sep 17, 2026 | 8:31 PM

ಇತ್ತೀಚೆಗೆ ಬಿಡುಗಡೆ ಆದ ‘ಅಮೆರಿಕ ಅಮೆರಿಕ 2’ ಸಿನಿಮಾವನ್ನು ಅನೇಕ ಸೆಲೆಬ್ರಿಟಿಗಳು ವೀಕ್ಷಿಸಿದ್ದಾರೆ. ಸುಧಾ ಮೂರ್ತಿ ಅವರು ಈ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಅವರಿಗೆ ಈ ಚಿತ್ರ ಸಖತ್ ಇಷ್ಟ ಆಗಿದೆ. ನಾಗತಿಹಳ್ಳಿ ಚಂದ್ರಶೇಖರ್ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ.

ಇತ್ತೀಚೆಗೆ ಬಿಡುಗಡೆ ಆದ ‘ಅಮೆರಿಕ ಅಮೆರಿಕ 2’ ಸಿನಿಮಾವನ್ನು ಅನೇಕ ಸೆಲೆಬ್ರಿಟಿಗಳು ವೀಕ್ಷಿಸಿದ್ದಾರೆ. ಸುಧಾ ಮೂರ್ತಿ ಅವರು ಈ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಅವರಿಗೆ ಈ ಚಿತ್ರ ಸಖತ್ ಇಷ್ಟ ಆಗಿದೆ. ನಾಗತಿಹಳ್ಳಿ ಚಂದ್ರಶೇಖರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ಪೃಥ್ವಿ ಅಂಬಾರ್, ನಿರೂಪ್ ಭಂಡಾರಿ, ಶಾನ್ವಿ ಶ್ರೀವಾಸ್ತವ ಅವರು ಅಭಿನಯಿಸಿದ್ದಾರೆ. ‘ಮೊದಲ ಭಾಗಕ್ಕಿಂತ ಇದು ಭಿನ್ನವಾಗಿದೆ. ಈಗಿನ ಕಾಲದ ವೈವಾಹಿಕ ಸಂಬಂಧದ ಬಗ್ಗೆ ಈ ಚಿತ್ರವನ್ನು ರೂಪಿಸಿದ್ದಾರೆ. ಸಿಯಾಟಲ್ ನಗರವನ್ನು ಇಷ್ಟ ಚೆನ್ನಾಗಿ ತೋರಿಸಿದ್ದನ್ನು ನಾನು ಬೇರೆ ಎಲ್ಲಿಯೂ ನೋಡಿಲ್ಲ. ಕುಟುಂಬ ಸಮೇತರಾಗಿ ನೋಡಬಹುದಾದ ಉತ್ತಮ ಸಿನಿಮಾ ಇದು. ದಯವಿಟ್ಟು ಕನ್ನಡಿಗರು ಈ ಸಿನಿಮಾವನ್ನು ಗೆಲ್ಲಿಸಬೇಕು. ಇದರಲ್ಲಿ ಲಾಂಗು ಮಚ್ಚು ಏನೂ ಇಲ್ಲ. ನಮ್ಮ ವಯಸ್ಸಿನವರು ಇದನ್ನು ತುಂಬಾ ಎಂಜಾಯ್ ಮಾಡುತ್ತೇವೆ. ಮನೋಮೂರ್ತಿ ಅವರ ಸುಮಧುರವಾದ ಸಂಗೀತ ಈ ಸಿನಿಮಾದಲ್ಲಿದೆ’ ಎಂದು ಸುಧಾ ಮೂರ್ತಿ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More