AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಗುಂಡು, ತುಂಡು: ಬಿಯರ್, ಹಾಟ್ ಡ್ರಿಂಕ್ಸ್​​ಗೆ ಮುಗಿಬಿದ್ದ ಜನ

ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಗುಂಡು, ತುಂಡು: ಬಿಯರ್, ಹಾಟ್ ಡ್ರಿಂಕ್ಸ್​​ಗೆ ಮುಗಿಬಿದ್ದ ಜನ

ಬಿ ಮೂರ್ತಿ, ನೆಲಮಂಗಲ
| Edited By: |

Updated on:Jul 07, 2024 | 6:03 PM

Share

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಸುಧಾಕರ್ ಗೆಲುವು ಸಾಧಿಸಿದ ಹಿನ್ನಲೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಬಿಜೆಪಿ ಅಧ್ಯಕ್ಷ ಜಗದೀಶ್ ಚೌದ್ರಿ ಬಾಡೂಟ ಕಾರ್ಯಕ್ರಮ ಆಯೋಜಿಸಿದ್ದರು. ಈ ವೇಳೆ 90 ಪಾಕೇಟ್ ಜೊತೆ ಬಿಯರ್​ ಬಾಟಲ್​ ಅನ್ನು ಹಂಚಿದ್ದಾರೆ. ಮದ್ಯದ ಬಾಟಲ್​​ಗಾಗಿ ಮುಗಿಬಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ನೆಲಮಂಗಲ, ಜುಲೈ 07: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್‌ (K. Sudhakar)
ಗೆಲುವು ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ಅಭಿನಂದನಾ ಸಮಾರಂಭ ಆಯೋಜಿಸಿದ್ದು, ಬಾಡೂಟ ಹಾಗೂ ಎಣ್ಣೆಯನ್ನು (liquor) ಕೂಡ ಹಂಚಲಾಗಿದೆ. 90 ಪಾಕೇಟ್ ಜೊತೆ ಬಿಯರ್ ಬಾಟಲ್​ನ್ನು ನೀಡಲಾಗಿದೆ. ಈ ವೇಳೆ ಮದ್ಯದ ಬಾಟಲ್​​ಗಾಗಿ ಜನರು ಮುಗಿಬಿದಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಅಬಕಾರಿ ಡಿಸಿ ನಾಗೇಶ್ ಪರ್ಮಿಷನ್ ಕೊಟ್ಟಿದ್ದಾರೆ ನಾವೇನೂ ಮಾಡುವುದಕ್ಕೆ ಆಗಲ್ಲ ಎಂದು ನೆಲಮಂಗಲ ಪೊಲೀಸರು ಹೇಳಿದ್ದಾರೆ. ಮದ್ಯದ ಪಾರ್ಟಿ ಬಗ್ಗೆ ಗೊತ್ತಿದ್ದರೂ ನೂತನ ಎಸ್​ಪಿ ಸಿ.ಕೆ.ಬಾಬಾ ಸುಮ್ಮನಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jul 07, 2024 06:01 PM
Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More