ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್ ಬಂದ್, ವಾಹನ ಸಂಚಾರ ಅಸ್ತವ್ಯಸ್ತ
ಬೆಳಗಾವಿ-ಧಾರವಾಡ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ. ಸ್ವಾಮಿನಾಥನ್ ವರದಿ ಜಾರಿ ಹಾಗೂ ಕಬ್ಬಿಗೆ 5,500 ರೂಪಾಯಿ ಬೆಂಬಲ ಬೆಲೆ ನಿಗದಿ ಮಾಡುವಂತೆ ರೈತರು ಆಗ್ರಹಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ, ಅಕ್ಟೋಬರ್ 13: ಕಬ್ಬಿಗೆ ಎಂಎಸ್ಪಿ ಹೆಚ್ಚಳಕ್ಕೆ ಆಗ್ರಹಿಸಿ ಹಿರೇಬಾಗೇವಾಡಿ ಟೋಲ್ ಸಂಪೂರ್ಣ ಬಂದ್ ಮಾಡುವ ಮೂಲಕ ರೈತರು ಬೆಳಗಾವಿಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ-ಧಾರವಾಡ ಹೆದ್ದಾರಿ ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿರುವ ಕಾರಣ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಪ್ರತಿಭಟನಾ ನಿರತ ಬೆಳೆಗಾರರು ಕಬ್ಬಿಗೆ ಪ್ರತಿ ಟನ್‌ಗೆ 5,500 ರೂಪಾಯಿ ಬೆಂಬಲ ಬೆಲೆ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಈ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳು ಸೇವೆ ಮಾಡಿದ ರೈತರು, ಪೊರಕೆ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರಸಂಗವೂ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!

