ಹುನಗುಂದದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಬಂದ್

Edited By:

Updated on: Oct 13, 2026 | 9:59 AM

ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ಕಬ್ಬು ಬೆಳೆಗಾರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ರಾಯಚೂರು-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಹೆದ್ದಾರಿಯಲ್ಲಿ ವಾಹನಗಳ ಸಾಲುಗಟ್ಟಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಬಾಗಲಕೋಟೆ ಮಾತ್ರವಲ್ಲದೆ ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಇಂದಿನಿಂದ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಬಾಗಲಕೊಟೆ, ಅಕ್ಟೋಬರ್ 13: ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ಕಬ್ಬು ಬೆಳೆಗಾರರು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರು ರಾಯಚೂರು-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶವನ್ನು ಹೊರಹಾಕಿದ್ದಾರೆ. ಈ ಪ್ರತಿಭಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಸಾಲು ಸಾಲಾಗಿ ವಾಹನಗಳು ನಿಂತಿರುವುದು ಕಂಡುಬಂದಿದ್ದು, ಪ್ರಯಾಣಿಕರಿಗೆ ತೊಂದರೆಯಾಗಿದೆ. ಕಬ್ಬು ಬೆಳೆಗಾರರು ಹಲವು ದಿನಗಳಿಂದ ಬಾಕಿ ಇರುವ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಕಬ್ಬಿನ ಬೆಲೆ ನಿಗದಿ, ಬಾಕಿ ಪಾವತಿ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಅವರು ಆಗ್ರಹಿಸುತ್ತಿದ್ದಾರೆ.

ರೈತರ ಬೇಡಿಕೆಗಳ ಸಂಬಂಧ ನವದೆಹಲಿಯಲ್ಲಿ ಸೋಮವಾರ ರೈತರ ಜತೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಪ್ರಲ್ಹಾದ್ ಜೋಶಿ ಸಭೆ ನಡೆಸಿದ್ದರು. ಅದು ವಿಫಲವಾಗಿತ್ತು. ಇದರ ಬೆನ್ನಲ್ಲೇ ರೈತರು ಮತ್ತೆ ಬೀದಿಗಿಳಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More